ನವದೆಹಲಿ: ಕೇಂದ್ರ ಸರ್ಕಾರದ ಜನಧನ್ ಯೋಜನೆಯಡಿ ತೆರೆಯಲಾದ ಬ್ಯಾಂಕ್ ಖಾತೆಗಳಲ್ಲಿನ ಠೇವಣಿ ಮೊತ್ತ 1.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಂಕಿಅಂಶ ತಿಳಿಸಿದೆ.
2014ರ ಆಗಸ್ಟ್ 15ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಜನಧನ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಇದೀಗ ಯೋಜನೆ ಏಳು ವರ್ಷಗಳನ್ನು ಪೂರೈಸಿದೆ.
ಜನಧನ ಯೋಜನೆಯ 44.23 ಕೋಟಿಗೂ ಅಧಿಕ ಖಾತೆಗಳಲ್ಲಿ 2021ರ ಡಿಸೆಂಬರ್ ಅಂತ್ಯದಲ್ಲಿ 1,50,936.36 ಕೋಟಿ ರೂಪಾಯಿ ಹಣ ಠೇವಣಿ ಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಒಟ್ಟು ಖಾತೆಗಳ ಪೈಕಿ ಸುಮಾರು 24.61 ಕೋಟಿ ಖಾತೆದಾರರು ಮಹಿಳೆಯರು ಎಂಬುದು ಗಮನಾರ್ಹ.
ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಶೂನ್ಯ ಬ್ಯಾಲೆನ್ಸ್ ನೊಂದಿಗೆ ಜನಧನ ಖಾತೆ ತೆರೆಯಬಹುದು. ಸರ್ಕಾರ ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಈ ಯೋಜನೆಯಡಿ ಬ್ಯಾಂಕಿಂಗ್ನಿಂದ ಹೊರಗಿರುವವರನ್ನು ಬ್ಯಾಂಕ್ನತ್ತ ಬರುವಂತೆ ಮಾಡಾಗಿದೆ. ಸರ್ಕಾರಿ ಯೋಜನೆಗಳ ಹಣ ಕೂಡ ಈ ಖಾತೆಗೆ ನೇರವಾಗಿ ಜಮೆಯಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.