ಬೆಂಗಳೂರು: ಖ್ಯಾತ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಚಂಪಾ ಎಂದೇ ಪ್ರಖ್ಯಾತರಾಗಿದ್ದ ಅವರು ತಮ್ಮ ಸಾಹಿತ್ಯದಿಂದ ಕರುನಾಡಿನ ಹೃದಯ ಗೆದ್ದಿದ್ದಾರೆ.
ಬೆಂಗಳೂರಿನ ಕೋಣನಕುಂಟೆ ಆಸ್ಟ್ರಾ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಧಾರವಾಡದವರಾದ ಚಂಪಾ ಅವರು ಕೆಲವಾರು ವರ್ಷಗಳಿಂದ ಬೆಂಗಳೂರು ನಿವಾಸಿಯಾಗಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರು. ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ – ಹೊರನಾಡು – ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.
‘ಚಂಪಾ’ ನಿಧನಕ್ಕೆ ಸಿಎಂ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ಚಂದ್ರಶೇಖರ ಪಾಟೀಲ್ ಅವರ ಸ್ವತಂತ್ರ ಚಿಂತನೆಯ ಲೇಖನದಲ್ಲಿ ಮೊನಚು ಇರುತ್ತಿತ್ತು. ವಿಷಯವನ್ನು ಪ್ರತಿಪಾದಿಸುವ ರೀತಿ ಮತ್ತು ಪ್ರಸ್ತುತ ವಿಷಯಗಳ ಬಗ್ಗೆ ವಿಮರ್ಶಿಸಿ ವ್ಯವಸ್ಥೆಗೆ ಕನ್ನಡಿ ಹಿಡಿಯುವಂತಹ ಕೆಲಸ ಮಾಡಿದ್ದಾರೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವದೊಂದಿಗೆ ನೆರವೇರಿಸಲಾಗುವುದು ಎಂದಿದ್ದಾರೆ.
ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿರುವ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಶ್ರದ್ಧಾಂಜಲಿ ಅರ್ಪಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಾಯಿತು. pic.twitter.com/KqU6UdIIMr
— Basavaraj S Bommai (@BSBommai) January 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.