ನವದೆಹಲಿ: ಭಾರತದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿರುವ ಸಕಾರಾತ್ಮಕ ಬೆಳವಣಿಗೆ ನಡೆಯುತ್ತಿದೆ. ಕಳೆದ ಜುಲೈ ಮತ್ತು ಸಪ್ಟೆಂಬರ್ ನಡುವಿನ ತ್ರೈಮಾಸಿಕದಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿ 2 ಲಕ್ಷದಷ್ಟು ಹೆಚ್ಚಳವಾಗಿ 3.10 ಕೋಟಿ ತಲುಪಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕಾರ್ಮಿಕ ಸಚಿವಾಲಯ, ಉದ್ಯೋಗ ಸೃಷ್ಟಿಯೂ ದೇಶದ ಅರ್ಥ ವ್ಯವಸ್ಥೆಯ ಪ್ರಮುಖ 9 ವಲಯಗಳಲ್ಲಿ ಆಗಿರುವ ಉದ್ಯೋಗ ಸೃಜನೆ ಎಂದು ಹೇಳಿದೆ.
ತ್ರೈಮಾಸಿಕ ಉದ್ಯೋಗ ಸಮೀಕ್ಷೆ ವರದಿಯ ಪ್ರಕಾರ, ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ವಿಧಿಸಿದ ನಿರ್ಬಂಧಗಳು ತೆರವಾದ ನಂತರ ಎಲ್ಲಾ ರಾಜ್ಯಗಳಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ. ಉತ್ಪಾದನೆ, ನಿರ್ಮಾಣ, ವ್ಯಾಪಾರ, ಸಾರಿಗೆ, ಶಿಕ್ಷಣ, ಆರೋಗ್ಯ, ವಸತಿ, ಹೋಟೆಲ್, ಹಣಕಾಸು ಸೇವಾ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ.
ತ್ರೈಮಾಸಿಕ ಉದ್ಯೋಗ ಸಮೀಕ್ಷೆಯು ಹತ್ತು ಅಥವಾ ಹೆಚ್ಚು ಉದ್ಯೋಗಗಳನ್ನು ಒಳಗೊಂಡ ಸಂಸ್ಥೆಗಳ ದತ್ತಾಂಶವನ್ನು ಒಳಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.