ಬೆಂಗಳೂರು: ಕೋವಿಡ್ ಸಾಂಕ್ರಾಮಿಕಕ್ಕೆ ತುತ್ತಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಪ್ರಧಾನಿ ಮತ್ತು ಮುಖ್ಯಮಂತ್ರಿಗಳ ನಡುವೆ ಸುಮಾರು ಐದು ನಿಮಿಷಗಳ ಕಾಲ ಮಾತುಕತೆ ನಡೆದಿದೆ. ತಮ್ಮ ಕುಟುಂಬದ ಇಬ್ಬರು ಸದಸ್ಯರಿಗೂ ಕೋವಿಡ್ ತಗುಲಿರುವ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಿಗೆ ವಿವರಣೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಎಲ್ಲರೂ ಸೂಕ್ತ ಚಿಕಿತ್ಸೆಯನ್ನು ತೆಗೆದುಕೊಳ್ಳುವಂತೆ ಪ್ರಧಾನಿಗಳು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಲಹೆ ನೀಡಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಮಾತ್ರವಲ್ಲದೆ ಪ್ರಧಾನಿಯವರು ರಾಜ್ಯದ ಕೊರೋನಾ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ ಮತ್ತು ತಜ್ಞರ ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
PM Narendra Modi spoke with Karnataka CM Basavaraj Bommai and inquired about his health: CMO
Bommai tested positive for COVID-19 yesterday
(File photos) pic.twitter.com/yjTWW4rPAn
— ANI (@ANI) January 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.