ನವದೆಹಲಿ: ದೇಶ ಕಂಡ ಮಹಾನ್ ಸಂತ, ವೇದಾಂತ ಕೇಸರಿ ಸ್ವಾಮಿ ವಿವೇಕಾನಂದ ಅವರ ಜನ್ಮ ದಿನವನ್ನು ಎಂದು ಆಚರಿಸಲಾಗುತ್ತದೆ. ಪ್ರತಿವರ್ಷ ಜನವರಿ 12 ಸ್ವಾಮಿ ವಿವೇಕಾನಂದರ ಜಯಂತಿಯನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.
1984 ರಲ್ಲಿ ಭಾರತ ಸರ್ಕಾರವು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಘೋಷಣೆ ಮಾಡಿತು. ಭಾರತದ ಯುವಜನತೆಯನ್ನು ರಾಷ್ಟ್ರ ನಿರ್ಮಾಣಕ್ಕಾಗಿ ಐಕ್ಯ ಶಕ್ತಿಯಾಗಿ ಪರಿವರ್ತಿಸಿದ ಕೀರ್ತಿ ವಿವೇಕಾನಂದರಿಗೆ ಸಲ್ಲುತ್ತದೆ.
ಭಾರತದ ಶ್ರೇಷ್ಠ ತತ್ವಜ್ಞಾನಿ ಮತ್ತು ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರಾದ ವಿವೇಕಾನಂದ ಮತ್ತು ಅವರ ಪರಂಪರೆಯನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಯುವ ದಿನ 2022ರ ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 25 ನೇ ರಾಷ್ಟ್ರೀಯ ಯುವ ಉತ್ಸವವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.
I pay tributes to the great Swami Vivekananda on his Jayanti. His was a life devoted to national regeneration. He has motivated many youngsters to work towards nation building. Let us keep working together to fulfil the dreams he had for our nation.
— Narendra Modi (@narendramodi) January 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.