ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO) ಇಂದು ಮ್ಯಾನ್-ಪೋರ್ಟಬಲ್ ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.
ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಈ ಟ್ಯಾಂಕ್ ನಿರೋಧಕ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಫೈಯರ್ ಆಂಡ್ ಫಾರ್ಗೆಟ್ ಕ್ಷಿಪಣಿಯಾಗಿದೆ.
ಪರೀಕ್ಷಾರ್ಥ ಹಾರಾಟದ ವೇಳೆ ಕ್ಷಿಪಣಿಯು ಗುರಿಯನ್ನು ಯಶಸ್ವಿಯಾಗಿ ನಾಶಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಸುಧಾರಿತ ತಂತ್ರಜ್ಞಾನ ಆಧಾರಿತ ರಕ್ಷಣಾ ವ್ಯವಸ್ಥೆ ಅಭಿವೃದ್ಧಿಯಲ್ಲಿ ಆತ್ಮನಿರ್ಭರ ಭಾರತದ ಕಡೆಗೆ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.
ಟ್ಯಾಂಕ್ ನಿರೋಧಕ ಕ್ಷಿಪಣಿಯ ಸ್ಥಿರ ಯಶಸ್ವಿ ಪ್ರದರ್ಶನಕ್ಕಾಗಿ ಅವರು ಡಿಆರ್ಡಿಓ ಅನ್ನು ಅಭಿನಂದಿಸಿದ್ದಾರೆ. ಡಿಆರ್ಡಿಒ ಅಧ್ಯಕ್ಷ ಡಾ.ಜಿ.ಸತೀಶ್ ರೆಡ್ಡಿ ಅವರು ಪರೀಕ್ಷಾ ಸಮಯದಲ್ಲಿ ಕ್ಷಿಪಣಿ ತೋರ್ಪಡಿಸಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ತಂಡವನ್ನು ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.