ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ನೂತನ ಮುಖ್ಯಸ್ಥರ ನೇಮಕವಾಗಿದೆ. ಪ್ರಸಿದ್ಧ ರಾಕೆಟ್ ವಿಜ್ಞಾನಿ ಸೋಮನಾಥ್ ಅವರು ನೇಮಕವಾಗಿದ್ದಾರೆ. ಹಾಲಿ ಮುಖ್ಯಸ್ಥ ಕೆ ಶಿವನ್ ಅವರು ಶುಕ್ರವಾರ ನಿವೃತ್ತರಾಗಲಿದ್ದಾರೆ.
ಪ್ರಸ್ತುತ ಸೋಮನಾಥ್ ಅವರು ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಕೆಟ್ ವಿಜ್ಞಾನದಲ್ಲಿ ನಿಪುಣರಾಗಿ ಇರುವ ಇವರು ಉಡಾವಣ ವಾಹನದ ವಿನ್ಯಾಸ ಮತ್ತು ರಾಕೆಟ್ ಸಮನ್ವಯತೆ ರೂಪಿಸುವಲ್ಲಿ ತಜ್ಞತೆ ಹೊಂದಿದ್ದಾರೆ. ಎರಡು ವರ್ಷಗಳ ಕಾಲ ಲಿಕ್ವಿಡ್ ಪ್ರೋಪಲ್ಷನ್ ಸಿಸ್ಟಮ್ಸ್ ಸೆಂಟರ್ನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಅವರಿಗಿದೆ.
ಸೋಮನಾಥ್ ಅವರನ್ನು ಮೂರು ವರ್ಷಗಳ ಅವಧಿಗೆ ಇಸ್ರೋ ಮುಖ್ಯಸ್ಥರನ್ನಾಗಿ ಮತ್ತು ಬಾಹ್ಯಾಕಾಶ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಕೇರಳದ ಎರ್ನಾಕುಲಂನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪಡೆದ ಇವರು ಕೇರಳ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಬೆಂಗಳೂರಿನ ಐಐಎಸ್ಸಿಯಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ಇವರು ವಿಶ್ವದಲ್ಲಿ ಕರ್ತವ್ಯವನ್ನು ಆರಂಭಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.