ನವದೆಹಲಿ: ಕೋವಿಡ್-19 ನ ಓಮಿಕ್ರಾನ್ ರೂಪಾಂತರವು ಲಸಿಕೆ ಹಾಕದ ಜನರಿಗೆ ಹೆಚ್ಚು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಎಚ್ಚರಿಸಿದ್ದಾರೆ
ಜಿನೀವಾದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಅವರು, ಓಮಿಕ್ರಾನ್ ಡೆಲ್ಟಾಕ್ಕಿಂತ ಕಡಿಮೆ ತೀವ್ರತರವಾದ ರೋಗವನ್ನು ಉಂಟುಮಾಡಿದರೂ ಇದು ಅಪಾಯಕಾರಿ ವೈರಸ್ ಆಗಿದೆ, ವಿಶೇಷವಾಗಿ ಲಸಿಕೆ ಹಾಕದವರಿಗೆ ಇದು ಹೆಚ್ಚು ಅಪಾಯಕಾರಿ. ಓಮಿಕ್ರಾನ್ ರೂಪಾಂತರದಿಂದ ದೊಡ್ಡ ಮಟ್ಟದಲ್ಲಿ ಸೋಂಕು ಹರಡುತ್ತಿದೆ, ಇದು ಬಹುತೇಕ ಎಲ್ಲಾ ದೇಶಗಳಲ್ಲಿ ಡೆಲ್ಟಾವನ್ನು ವೇಗವಾಗಿ ರಿಪ್ಲೇಸ್ ಮಾಡುತ್ತಿದೆ ಎಂದು ಹೇಳಿದ್ದಾರೆ.
ಆಫ್ರಿಕಾದ ಕೋವಿಡ್ ಲಸಿಕೆ ದರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಆಫ್ರಿಕಾದಲ್ಲಿ 85 ಪ್ರತಿಶತಕ್ಕಿಂತ ಹೆಚ್ಚು ಜನರು ಇನ್ನೂ ಒಂದು ಡೋಸ್ ಲಸಿಕೆಯನ್ನು ಸ್ವೀಕರಿಸಿಲ್ಲ. ನಾವು ಈ ಅಂತರವನ್ನು ತಗ್ಗಿಸದ ಹೊರತು ಸಾಂಕ್ರಾಮಿಕ ರೋಗದ ತೀವ್ರ ಹಂತವನ್ನು ಕೊನೆಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಈ ವರ್ಷದ ಮಧ್ಯದ ವೇಳೆಗೆ ಪ್ರತಿ ದೇಶದ 70 ಪ್ರತಿಶತದಷ್ಟು ಜನಸಂಖ್ಯೆಗೆ ಲಸಿಕೆ ಹಾಕುವ ನಮ್ಮ ಗುರಿಯನ್ನು ತಲುಪಲು ನಾವು ಇನ್ನೂ ಬಹಳ ದೂರ ಸಾಗಬೇಕಾಗಿದೆ. 90 ದೇಶಗಳು ಇನ್ನೂ 40 ಪ್ರತಿಶತ ಗುರಿಯನ್ನು ತಲುಪಿಲ್ಲ ಮತ್ತು ಅವುಗಳಲ್ಲಿ 36 ದೇಶಗಳು ತಮ್ಮ ಜನಸಂಖ್ಯೆಯ ಶೇಕಡಾ 10 ಕ್ಕಿಂತ ಕಡಿಮೆ ಲಸಿಕೆಯನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.