ನವದೆಹಲಿ: ಭಾರತ ಕೇವಲ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ 155 ಕೋಟಿಗೂ ಹೆಚ್ಚು ಕೋವಿಡ್ 19 ಲಸಿಕೆ ಡೋಸ್ಗಳನ್ನು ತನ್ನ ಜನರಿಗೆ ನೀಡಿದ್ದು, ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಅವರು ಭಾರತವನ್ನು ಅಭಿನಂದಿಸಿದ್ದಾರೆ.
ಟ್ವೀಟ್ ಮೂಲಕ ಅಭಿನಂದಿಸಿರುವ ಅವರು, ಭಾರತವು ಹೊಸ ವರ್ಷದಲ್ಲಿ ಹೊಸ ಸಾಧನೆಯನ್ನು ಮಾಡಿದೆ. ಕೇವಲ ಒಂದು ವರ್ಷದೊಳಗೆ 155 ಕೋಟಿ ಕೋವಿಡ್ ಲಸಿಕೆ ಡೋಸ್ ನೀಡಿದೆ. ಇದಕ್ಕಾಗಿ ಟೀಂ ಇಂಡಿಯಾಗೆ ಅಭಿನಂದನೆಗಳು ಎಂದಿದ್ದಾರೆ.
ಈ ವೇಗವನ್ನು ಮುಂದುವರಿಸುವಂತೆ ಮತ್ತು ಲಸಿಕೆಯನ್ನು ಸ್ವೀಕರಿಸದವರು ಲಸಿಕೆ ಹಾಕಿಸಿಕೊಳ್ಳುವಂತೆ ಡಾ ಮಾಂಡವಿಯಾ ಜನರಿಗೆ ಮನವಿ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿರುವ ಆರೋಗ್ಯ ಸಚಿವರು, ಯುವ ಭಾರತದಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ಉತ್ಸಾಹವನ್ನು ಕಾಣುತ್ತಿದ್ದೇವೆ ಎಂದು ಹೇಳಿದ್ದಾರೆ. 15 ರಿಂದ 18 ವರ್ಷದೊಳಗಿನ ಮೂರು ಕೋಟಿಗೂ ಹೆಚ್ಚು ಯುವಕರು ಕೋವಿಡ್ -19 ಲಸಿಕೆಯನ್ನು ಮೊದಲ ಡೋಸ್ ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅರ್ಹ ಯುವ ಗೆಳೆಯರು ಆದಷ್ಟು ಬೇಗ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.