ನವದೆಹಲಿ: ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು “ಪರೀಕ್ಷಾ ಪೇ ಚರ್ಚಾ 2022” 5 ನೇ ಆವೃತ್ತಿಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಆಹ್ವಾನಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಇದೆಂದು ಹೇಳಿದ್ದಾರೆ.
ಪರೀಕ್ಷಾ ಪೇ ಚರ್ಚಾ ಒಂದು ವಿಶಿಷ್ಟವಾದ ಸಂವಾದಾತ್ಮಕ ಕಾರ್ಯಕ್ರಮವಾಗಿದ್ದು, ರಾಷ್ಟ್ರದಾದ್ಯಂತ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ವಿದೇಶದಿಂದ ಬಂದವರು ಪ್ರಧಾನಿ ಮೋದಿಯವರೊಂದಿಗೆ ಸಂವಾದ ನಡೆಸಿ ಪರೀಕ್ಷೆಗಳಿಂದಾಗುವ ಒತ್ತಡವನ್ನು ನಿವಾರಿಸುವ ಬಗ್ಗೆ ಚರ್ಚಿಸುತ್ತಾರೆ.
ಕಳೆದ ವರ್ಷದಂತೆ ಆನ್ಲೈನ್ ಮೋಡ್ನಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.
ಭಾಗವಹಿಸುವವರನ್ನು ಆಯ್ಕೆ ಮಾಡಲು ಕಳೆದ ತಿಂಗಳ 28 ರಿಂದ ಈ ತಿಂಗಳ 20 ರವರೆಗೆ ವಿವಿಧ ವಿಷಯಗಳ ಕುರಿತು ಆನ್ಲೈನ್ ಸೃಜನಶೀಲ ಬರವಣಿಗೆ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. 9 ರಿಂದ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಈ ಸ್ಪರ್ಧೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.