ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್ಪುರ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮುಂಬರುವ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಪ್ರಯಾಗರಾಜ್ನ ಸಿರತು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಉತ್ತರಾಖಂಡದ ಮಾಜಿ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರು ಆಗ್ರಾ ಗ್ರಾಮಾಂತರ ವಿಧಾನಸಭೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಯುಪಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷವು 107 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೆಸರುಗಳನ್ನ ಪ್ರಕಟಿಸಿದ್ದಾರೆ.
ಈ ಪಟ್ಟಿಯಲ್ಲಿ 63 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ ಸುಮಾರು ಶೇ.20 ರಷ್ಟು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಉತ್ತರ ಪ್ರದೇಶದ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಅವರನ್ನು ಮಥುರಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.