ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 18 ರಂದು ಉತ್ತರಪ್ರದೇಶದ ವಾರಣಾಸಿಯಿಂದ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಶನಿವಾರ ತಿಳಿಸಿದೆ.
ಚುನಾವಣಾ ಆಯೋಗವು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ಪಕ್ಷದ ಕಾರ್ಯಕರ್ತರನ್ನು ಒಳಗೊಂಡ ಮೋದಿಯವರ ಮೊದಲ ರಾಜಕೀಯ ಕಾರ್ಯಕ್ರಮ ಇದಾಗಿದೆ.
ಇದು ವರ್ಚುವಲ್ ಸಂವಾದ ಆಗಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯ ಉತ್ತರ ಪ್ರದೇಶ ಘಟಕದ ಟ್ವಿಟರ್ ಹ್ಯಾಂಡಲ್ ಕಾರ್ಯಕ್ರಮದ ವೇಳಾಪಟ್ಟಿಯನ್ನು ಹಂಚಿಕೊಂಡಿದೆ ಮತ್ತು ಜನರು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು NaMo ಅಪ್ಲಿಕೇಶನ್ ಮೂಲಕ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ.
ವಿಧಾನಸಭಾ ಚುನಾವಣೆಯನ್ನು ಘೋಷಿಸಿದ ಚುನಾವಣಾ ಆಯೋಗವು ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಕಾರಣದಿಂದ ಜನವರಿ 15 ರವರೆಗೆ ಸಾರ್ವಜನಿಕ ಸಭೆಗಳು ಮತ್ತು ರೋಡ್ಶೋಗಳನ್ನು ನಿಷೇಧಿಸಿದೆ ಮತ್ತು ಭವಿಷ್ಯದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.