ನವದೆಹಲಿ: ಭಾರತ ಕೋವಿಡ್ ಲಸಿಕೆ ಅಭಿಯಾನದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಅಭಿನಂದಿಸಿದ್ದಾರೆ. ಅಲ್ಲದೇ, ಸರ್ಕಾರ ಮತ್ತು ಜನರು ಒಟ್ಟಾಗಿ ಅಸಾಧ್ಯವಾದ ಸವಾಲುಗಳನ್ನು ಹೇಗೆ ಜಯಿಸಬಹುದು ಎಂದು ದೇಶವು ಜಗತ್ತಿಗೆ ತೋರಿಸಿದೆ ಎಂದು ಹೇಳಿದ್ದಾರೆ.
ಇಂದು ಕೋವಿಡ್-19 ವಿರುದ್ಧದ ದೇಶಾದ್ಯಂತದ ಲಸಿಕೆ ಅಭಿಯಾನ ಒಂದು ವರ್ಷವನ್ನು ಪೂರ್ಣಗೊಳಿಸಿದೆ, ಇದುವರೆಗೆ 156.76 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳನ್ನು ನಾಗರಿಕೆ ನೀಡಲಾಗಿದೆ.
ಈ ಪ್ರಯತ್ನಕ್ಕಾಗಿ ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು, ಕೋವಿಡ್ ಯೋಧರು ಮತ್ತು ದೇಶದ ಜನರನ್ನು ಶಾ ಅಭಿನಂದಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ನಾಯಕತ್ವ, ದೃಢಸಂಕಲ್ಪ ಮತ್ತು ನಿರಂತರ ಪ್ರಯತ್ನದಿಂದ ಭಾರತವು ವಿಶ್ವಕ್ಕೆ ಮಾದರಿಯಾಗಿದೆ, ರಾಷ್ಟ್ರದ ಹಿತಾಸಕ್ತಿಯಲ್ಲಿ ಸರ್ಕಾರ ಮತ್ತು ನಾಗರಿಕರು ಒಗ್ಗೂಡಿದರೆ ಮತ್ತು ಒಂದೇ ಗುರಿಯನ್ನು ಹೊಂದಿದರೆ ದೇಶವು ಅಸಾಧ್ಯ ಮತ್ತು ಪ್ರತಿ ಸವಾಲನ್ನು ಜಯಿಸಿಯೇ ಜಯಿಸಬಹುದು” ಎಂದು ಅವರು ಟ್ವೀಟ್ ಮಾಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ಪ್ರಬಲ ಮತ್ತು ಸ್ಪೂರ್ತಿದಾಯಕ ನಾಯಕತ್ವದಲ್ಲಿ ಕೋವಿಡ್ ವಿರುದ್ಧದ ಹೋರಾಟದಲ್ಲಿ ವಿಶ್ವದ ಅತಿದೊಡ್ಡ ಉಚಿತ ಲಸಿಕೆ ಅಭಿಯಾನದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದಕ್ಕಾಗಿ ಪ್ರತಿಭಾವಂತ ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು, ಎಲ್ಲಾ ಕರೋನಾ ಯೋಧರು ಮತ್ತು ನಾಗರಿಕರನ್ನು ನಾನು ಅಭಿನಂದಿಸುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.