ನವದೆಹಲಿ: ಪಂಜಾಬ್ ಅಸೆಂಬ್ಲಿ ಚುನಾವಣೆಯ ಮತದಾನದ ದಿನಾಂಕಗಳನ್ನು ಫೆಬ್ರವರಿ 20 ಕ್ಕೆ ಮುಂದೂಡಲು ಭಾರತೀಯ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಮೊದಲು ಅಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು.
ಕಾಂಗ್ರೆಸ್, ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಚುನಾವಣೆಯನ್ನು ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಫೆಬ್ರವರಿ 16 ರಂದು ಗುರು ರವಿದಾಸ್ ಜನ್ಮದಿನದ ಹಿನ್ನೆಲೆಯಲ್ಲಿ ಪಂಜಾಬ್ ರಾಜ್ಯದಿಂದ ಪರಿಶಿಷ್ಟ ಜಾತಿಯ ಅನೇಕ ಜನರು ವಾರಣಾಸಿಗೆ ಭೇಟಿ ನೀಡುವ ಸಾಧ್ಯತೆಯಿರುವುದರಿಂದ ಈ ವಿನಂತಿಯನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾ ಆಯೋಗ ಹೊರಡಿಸಿದ ಹೇಳಿಕೆಯ ಪ್ರಕಾರ, ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಫೆಬ್ರವರಿ 1 ರಂದು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಫೆಬ್ರವರಿ 2 ರವರೆಗೆ ಹಿಂಪಡೆಯಬಹುದು.
ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.