ನವದೆಹಲಿ: ಉತ್ತರಪ್ರದೇಶ, ಉತ್ತರಾಖಂಡ ಮತ್ತು ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಯನ್ನು ಹಿಡಿಯಲಿದೆ ಎಂದು ರಿಪಬ್ಲಿಕ್ ಟಿವಿ-ಪಿ-ಎಂಎಆರ್ಕ್ಯು ನಡೆಸಿದ ಸಮೀಕ್ಷೆಯ ವರದಿ ತಿಳಿಸಿದೆ.
ಗೋವಾ ಮತ್ತು ಪಂಜಾಬ್ ರಾಜ್ಯಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಉತ್ತರಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ. ಆದರೆ ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಸ್ಥಾನಗಳು ಸಿಗಲಿದೆ ಎಂದು ಸಮೀಕ್ಷೆ ಹೇಳಿದೆ. 2017ರಲ್ಲಿ ಬಿಜೆಪಿ ಉತ್ತರಪ್ರದೇಶದಲ್ಲಿ 312 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ 252 ರಿಂದ 272 ಸ್ಥಾನಗಳ ದೊರೆಯಬಹುದು ಎಂದು ಸಮೀಕ್ಷೆ ಹೇಳಿದೆ.
ಉತ್ತರಾಖಂಡದಲ್ಲಿ ಬಿಜೆಪಿ 36ರಿಂದ 42 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆ ಹೇಳಿದೆ.
ಮಣಿಪುರದಲ್ಲಿಯು 31-37 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.
ಗೋವಾದಲ್ಲಿ ಬಿಜೆಪಿಗೆ 16ರಿಂದ 20 ಸ್ಥಾನಗಳು ದೊರೆಯಬಹುದು. ಕಾಂಗ್ರೆಸ್ ಪಕ್ಷಕ್ಕೆ 9 ರಿಂದ 13 ಸ್ಥಾನಗಳು ದೊರೆಯಬಹುದು, ಆಮ್ ಆದ್ಮಿ ಪಕ್ಷಕ್ಕೆ 4ರಿಂದ 8 ಸ್ಥಾನಗಳು ದೊರೆಯಬಹುದು ಎಂದು ಸಮೀಕ್ಷೆ ಹೇಳಿದೆ.
ಇಂಡಿಯಾ ಟಿವಿ-ಗ್ರೌಂಡ್ ಜೀರೋ ರಿಸರ್ಚ್ ಸಮೀಕ್ಷೆ ಕೂಡ ಉತ್ತರಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.