ನವದೆಹಲಿ: ಜನವರಿ 10ರಿಂದ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಮಿಕರು, 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಬೂಸ್ಟರ್ ಡೋಸ್ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮಾನ್ಸೂkf ಮಾಂಡವಿಯಾ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, “ಮತ್ತೊಂದು ದಿನ, ಮತ್ತೊಂದು ಮೈಲುಗಲ್ಲು ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಮಿಕರು ಮತ್ತು 60 ವರ್ಷ ಮೇಲ್ಪಟ್ಟ ನಾಗರಿಕರು ಜನವರಿ 10ರಿಂದ ಮುನ್ನೆಚ್ಚರಿಕೆ ಡೋಸ್ ಪಡೆದುಕೊಂಡಿದ್ದಾರೆ” ಎಂದಿದ್ದಾರೆ.
“ಯಾರೆಲ್ಲಾ ಅರ್ಹರಾಗಿದ್ದಾರೋ ಅವರು ಆದಷ್ಟು ಬೇಗ ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳುವಂತೆ ನಾನು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.
ಡಿಸೆಂಬರ್ 25ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಜನವರಿ 10ರಿಂದ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮುಂಚೂಣಿ ಕಾರ್ಮಿಕರಿಗೆ ಮತ್ತು ಅನಾರೋಗ್ಯ ಇರುವ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ಘೋಷಣೆ ಮಾಡಿದ್ದರು.
Another Day, Another Milestone 💉
Over 5️⃣0️⃣ lakh healthcare & frontline workers & citizens aged 60 years or above have received Precaution Dose, since 10th January.
I request all those who are eligible to get their Precaution Dose at the earliest.#SabkoVaccineMuftVaccine pic.twitter.com/XI2pWTrRWM
— Dr Mansukh Mandaviya (@mansukhmandviya) January 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.