ನವದೆಹಲಿ: ಪ್ರತಿಯೊಬ್ಬರು ವಿಶೇಷವಾಗಿ ಯುವಕರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಮನವಿ ಮಾಡಿದ್ದಾರೆ.
ಎಲ್ಲ ರಾಜ್ಯಗಳು ಮತ್ತು ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಬೇಕು. ಇದು ಪ್ರತಿಯೊಬ್ಬರಲ್ಲಿ ದೇಶಭಕ್ತಿಯ ಉತ್ಸಾಹವನ್ನು ತುಂಬುತ್ತದೆ ಎಂದಿದ್ದಾರೆ.
ಅವರು ನಿನ್ನೆ ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ನಡೆದ ರಿಟ್ರೀಡ್ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು.
ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಯುದ್ಧದ ಸಮಯದಲ್ಲಿ ವಿಶಿಷ್ಟವಾದ ಶೌರ್ಯವನ್ನು ಪ್ರದರ್ಶಿಸಿದ ವೀರರಿಗೆ ಗೌರವಾರ್ಪಣೆ ಮಾಡಿದರು. ಪ್ರತಿದಿನ ಸಂಜೆ ಸೂರ್ಯಾಸ್ತದ ಮೊದಲು ಸ್ಮಾರಕದಲ್ಲಿ ನಡೆಯುವ ನೆಕ್ಸ್ಟ್ ಆಫ್ ಕಿನ್ ಸಮಾರಂಭವನ್ನು ರೆಡ್ಡಿ ವೀಕ್ಷಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.