ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ-ಮಧ್ಯ ಏಷ್ಯಾ ಶೃಂಗಸಭೆಯ ಮೊದಲ ಸಭೆಯನ್ನು ಜನವರಿ 27 ರಂದು ವರ್ಚುವಲ್ ರೂಪದಲ್ಲಿ ಆಯೋಜಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಪ್ರಕಟಿಸಿದೆ.
ವರ್ಚುವಲ್ ಕಾರ್ಯಕ್ರಮದಲ್ಲಿ ಕಝಾಕಿಸ್ತಾನ್, ಕರ್ಗಿಜ್ ಗಣರಾಜ್ಯ, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಇದು ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳ ನಡುವೆ ನಾಯಕರ ಮಟ್ಟದಲ್ಲಿ ಈ ರೀತಿಯಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. “ಮೊದಲ ಭಾರತ-ಮಧ್ಯ ಏಷ್ಯಾ ಶೃಂಗಸಭೆಯು ಭಾರತದ ವಿಸ್ತೃತ ನೆರೆಹೊರೆಯ ಭಾಗವಾಗಿರುವ ಮಧ್ಯ ಏಷ್ಯಾದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ತೊಡಗಿಸುವಿಕೆಯ ಪ್ರತಿಬಿಂಬವಾಗಿದೆ.
“ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಎಲ್ಲಾ ಮಧ್ಯ ಏಷ್ಯಾದ ದೇಶಗಳಿಗೆ ಐತಿಹಾಸಿಕ ಭೇಟಿ ನೀಡಿದರು. ತರುವಾಯ, ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಉನ್ನತ ಮಟ್ಟದ ವಿನಿಮಯಗಳು ನಡೆದಿವೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.