ನವದೆಹಲಿ: ಭಾರತೀಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿ ಲಿಮಿಟೆಡ್ IREDA ನಲ್ಲಿ 1500 ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಇದು ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ 12 ಸಾವಿರ ಕೋಟಿ ರೂಪಾಯಿ ಸಾಲ ನೀಡಲು ಐಆರ್ಇಡಿಎಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.
ಇದು ಅದರ ನಿವ್ವಳ ಮೌಲ್ಯವನ್ನು ಹೆಚ್ಚಿಸುತ್ತದೆ, ಇದು ಹೆಚ್ಚುವರಿ ನವೀಕರಿಸಬಹುದಾದ ಇಂಧನ ಹಣಕಾಸಿಗೆ ಸಹಾಯ ಮಾಡುತ್ತದೆ. ಅದರ ಸಾಲ ಮತ್ತು ಎರವಲು ಕಾರ್ಯಾಚರಣೆಗಳನ್ನು ಸುಲಭಗೊಳಿಸಲು ಬಂಡವಾಳದ ಅಪಾಯದ ಅನುಪಾತವನ್ನು ಸುಧಾರಿಸುತ್ತದೆ ಎಂದು ಸಚಿವರು ಹೇಳಿದರು. ಈ ನಿರ್ಧಾರವು ಪ್ರತಿ ವರ್ಷ ಹತ್ತು ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದಿದ್ದಾರೆ.
ರಾಷ್ಟ್ರೀಯ ನೈರ್ಮಲ್ಯ ಸಿಬ್ಬಂದಿ ಆಯೋಗದ ಅಧಿಕಾರಾವಧಿಯನ್ನು 31.3.2022 ರ ನಂತರ ಮೂರು ವರ್ಷಗಳವರೆಗೆ ವಿಸ್ತರಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
ನಿಗದಿತ ಸಾಲದ ಖಾತೆಗಳಲ್ಲಿ ಸಾಲಗಾರರಿಗೆ ಆರು ತಿಂಗಳ ಕಾಲ ಚಕ್ರಬಡ್ಡಿ ಮತ್ತು ಸರಳ ಬಡ್ಡಿಯ ನಡುವಿನ ವ್ಯತ್ಯಾಸದ ಎಕ್ಸ್-ಗ್ರೇಷಿಯಾ ಪಾವತಿಯನ್ನು ಮಂಜೂರು ಮಾಡುವ ಯೋಜನೆಗೂ ಸಂಪುಟ ಅನುಮತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.