ನವದೆಹಲಿ: ಭಾರತದ ಶೇಕಡ 72ರಷ್ಟು ವಯಸ್ಕ ಜನಸಂಖ್ಯೆ ಸಂಪೂರ್ಣ ಲಸಿಕೆಯನ್ನು ಪಡೆದುಕೊಂಡಿದೆ ಮತ್ತು 15-18 ವಯಸ್ಸಿನ ಶೇಕಡ 52ರಷ್ಟು ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಗುರುವಾರ ಮಾಹಿತಿ ನೀಡಿದೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಇದುವರೆಗೆ ಶೇಕಡಾ 52ರಷ್ಟು 15ರಿಂದ 18 ವಯೋಮಾನದ ಮಕ್ಕಳು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಮತ್ತು 72% ರಷ್ಟು ವಯಸ್ಕ ಜನಸಂಖ್ಯೆ ಸಂಪೂರ್ಣ ಲಸಿಕೆಯನ್ನು ಪಡೆದುಕೊಂಡಿದೆ ಎಂದಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,17,532 ಕೋವಿಡ್ ಪ್ರಕರಣಗಳು ದಾಖಲಾಗಿದೆ ಮತ್ತು 380 ಸಾವುಗಳು ಸಂಭವಿಸಿದೆ. ಪ್ರಸ್ತುತ ಭಾರತದಲ್ಲಿ 19,24,051 ಸಕ್ರಿಯ ಪ್ರಕರಣಗಳು ಇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಗುಜರಾತ್, ಒಡಿಶಾ ಮತ್ತು ರಾಜಸ್ಥಾನದ ಗಳು ಅತಿ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಟಾಪ್ 10 ರಾಜ್ಯಗಳು ಎಂದಿದ್ದಾರೆ.
ಅಲ್ಲದೇ, ಭಾರತದಲ್ಲಿ ನೀಡಲಾದ ಒಟ್ಟು ಕೋವಿಡ್ 19 ಲಸಿಕೆ ಪ್ರಮಾಣಗಳು ಇಂದು 160 ಕೋಟಿ ಗಡಿ ದಾಟಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನವು ಹೊಸ ಎತ್ತರವನ್ನು ಮುಟ್ಟುತ್ತಿದೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ. ಲಸಿಕೆ ಹಾಕಿದ ನಂತರವೂ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವಂತೆ ಅವರು ಜನರನ್ನು ಕೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.