ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶೇ.71ರಷ್ಟು ಅನುಮೋದನೆಯೊಂದಿಗೆ ವಿಶ್ವ ನಾಯಕರ ಜಾಗತಿಕ ರೇಟಿಂಗ್ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.
13 ವಿಶ್ವ ನಾಯಕರ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶೇ.43ರಷ್ಟು ರೇಟಿಂಗ್ನೊಂದಿಗೆ ಆರನೇ ಸ್ಥಾನ ಪಡೆದುಕೊಂಡಿದ್ದಾರೆ. ಬೈಡೆನ್ ನಂತರ ಕೆನಡಾದ ಅಧ್ಯಕ್ಷ ಜಸ್ಟಿನ್ ಟ್ರುಡೊ ಶೇ.43ರಷ್ಟು ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಶೇ.41ರಷ್ಟು ಅನುಮೋದನೆ ರೇಟಿಂಗ್ ಪಡೆದುಕೊಂಡಿದ್ದಾರೆ.
ನವೆಂಬರ್ 2021 ರಲ್ಲಿ ಕೂಡ ಪ್ರಧಾನಿ ಮೋದಿ ಅವರು ಅತ್ಯಂತ ಜನಪ್ರಿಯ ವಿಶ್ವ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು.
ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್, ಯುಕೆ ಮತ್ತು ಯುಎಸ್ನಲ್ಲಿನ ಸರ್ಕಾರಿ ನಾಯಕರ ಅನುಮೋದನೆಯನ್ನು ಟ್ರ್ಯಾಕ್ ಮಾಡುತ್ತಿದೆ. ಮೇ 2020 ರಲ್ಲಿ, ಇದೇ ವೆಬ್ಸೈಟ್ ಪ್ರಧಾನಿ ಮೋದಿಯವರಿಗೆ ಶೇ.84ರಷ್ಟು ಅನುಮೋದನೆಯೊಂದಿಗೆ ಅತ್ಯಧಿಕ ರೇಟಿಂಗ್ ನೀಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.