ಬೆಂಗಳೂರು: ಕೊರೋನಾ 3ನೇ ಅಲೆಯ ಭೀತಿಯಿಂದ ರಾಜ್ಯವ್ಯಾಪಿ ವಿಧಿಸಲಾಗಿದ್ದ ವೀಕೆಂಡ್ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದೆ. ನಾಳೆಯಿಂದಲೇ ಈ ನಿರ್ಧಾರ ಜಾರಿಯಾಗಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಧಿಸಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಇದೀಗ ಸಿಎಂ ನೇತೃತ್ವದಲ್ಲಿ ಮಾರ್ಗಸೂಚಿ ಪರಿಷ್ಕರಣೆ ಮಾಡಿ ವಾರಾಂತ್ಯದ ನಿಷೇಧಾಜ್ಞೆ ರದ್ದುಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ರಾಜ್ಯದಲ್ಲಿ ರಾತ್ರಿ ನಿಷೇಧಾಜ್ಞೆ ಮುಂದುವರೆಯಲಿದೆ, ಈ ವಾರದಿಂದಲೇ ವಾರಾಂತ್ಯದ ಕರ್ಫ್ಯೂ ರದ್ದು ಮಾಡಲಾಗಿದೆ. ಆದರೆ, ಸರ್ಕಾರದ ಉಳಿದೆಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ.5ರಷ್ಟು ಮಾತ್ರ ಇದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.