ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ರಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯು ಅಂತಿಮ ಒಪ್ಪಿಗೆ ನೀಡಿ ಕೇಂದ್ರದ ಶೇ. 50 ಪಾಲು ಹಣ ಬಿಡುಗಡೆಗೆ ಅಂತಿಮ ಆದೇಶ ನೀಡಿದೆ. ಕೆ.ಐ.ಎ.ಡಿ.ಬಿ. ಉಳಿಕೆ ಶೇ.50 ಪಾಲು ಹೂಡಿಕೆಯೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ.
ಈ ಯೋಜನೆ ಕಾರ್ಯರೂಪಕ್ಕೆ ಬರಲು ಸಹಕರಿಸಿದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ, ಕೇಂದ್ರದ ರಸಾಯನಿಕ ಖಾತೆಯ ಸಚಿವರಾದ ಶ್ರೀ ಭಗವಂತ್ ಕೂಬಾರವರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಮುರುಗೇಶ್ ನಿರಾಣಿಯವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಸಹಕರಿಸಿದ ಕೇಂದ್ರ ರಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯ ಹಿಂದಿನ ಸಚಿವರಾಗಿದ್ದ ದಿವಂಗತ ಅನಂತಕುಮಾರ್, ಶ್ರೀ ಸದಾನಂದ ಗೌಡರು ಹಾಗೂ ಶ್ರೀ ಮಾನ್ ಸುಖ್ ಮಾಂಡವೀಯ ರವರಿಗೂ ಶ್ರೀ ನಳಿನ್ ಕುಮಾರ್ ಕಟೀಲ್ ರವರು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠದ ಬಳಿ ಸುಮಾರು 104 ಎಕರೆ ಕೆ.ಐ.ಎ.ಡಿ.ಬಿ. ಪ್ರದೇಶದಲ್ಲಿ ಪ್ರಾರಂಭಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.