ನವದೆಹಲಿ: ಭಾರತದಲ್ಲಿ ನಿಖರವಾದ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಡ್ರೋನ್ ತಂತ್ರಜ್ಞಾನವನ್ನು ಕೈಗೆಟುಕುವಂತೆ ಮಾಡಲು ಈ ವಲಯದ ಉದ್ಯಮಿಗಳಿಗೆ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ.
“ಕೃಷಿ ಯಾಂತ್ರೀಕರಣದ ಉಪ-ಮಿಷನ್” ನ ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಲಾಗಿದೆ, ಇದರಡಿ ಕೃಷಿ ಡ್ರೋನ್ಗಳ ವೆಚ್ಚದ ಶೇ.100 ರವರೆಗೆ ಒದಗಿಸುವುದು ಅಥವಾ 10 ಲಕ್ಷ ರೂಪಾಯಿಗಳವರೆಗೆ ಯಾವುದು ಕಡಿಮೆಯೋ ಅದನ್ನು ಕೃಷಿ ಸಂಸ್ಥೆಗಳಿಗೆ ನೀಡಲು ಯೋಜಿಸಲಾಗಿದೆ.
ರೈತರ ಹೊಲಗಳಲ್ಲಿ ಈ ತಂತ್ರಜ್ಞಾನದ ದೊಡ್ಡ ಪ್ರಮಾಣದ ಪ್ರಾತ್ಯಕ್ಷಿಕೆಗಳನ್ನು ನೀಡಲು, ಡ್ರೋನ್ಗಳನ್ನು ಖರೀದಿಸಲು ಕೃಷಿ ಯಂತ್ರೋಪಕರಣಗಳ ತರಬೇತಿ ಮತ್ತು ಪರೀಕ್ಷಾ ಸಂಸ್ಥೆಗಳು, ಐಸಿಎಆರ್ ಸಂಸ್ಥೆಗಳು, ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ರಾಜ್ಯ ಕೃಷಿ ವಿಶ್ವವಿದ್ಯಾನಿಲಯಗಳಿಗೆ ಅನುದಾನವನ್ನು ಒದಗಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.