ನವದೆಹಲಿ: ಗಣರಾಜ್ಯೋತ್ಸವ ಸಮಾರಂಭ ಇಂದಿನಿಂದಲೇ ಆರಂಭವಾಗುತ್ತಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯನ್ನು ಒಳಗೊಳ್ಳುವ ಸಲುವಾಗಿ ಜನವರಿ 26ರ ಬದಲು ಜ.23 ರಿಂದಲೇ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಲಿದೆ ಎಂದು ಮೋದಿ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದ ಅಂಗವಾಗಿ ಇಂಡಿಯಾ ಗೇಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ನೇತಾಜಿಯವರ ಹಾಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಸಂಜೆ 6 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇತಾಜಿಯವರ ಹಾಲೋಗ್ರಾಮ್ ಪ್ರತಿಮೆ ಅನಾವರಣಗೊಳ್ಳಲಿದೆ.
“ಇಡೀ ರಾಷ್ಟ್ರವು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಗ್ರಾನೈಟ್ನಿಂದ ಮಾಡಲ್ಪಟ್ಟ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್ನಲ್ಲಿ ಸ್ಥಾಪಿಸಲಾಗುವುದು ಎಂಬ ಮಾಹಿತಿ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಇದು ಭಾರತ ಅವರಿಗೆ ಋಣಿಯಾಗಿರುವ ಸಂಕೇತವಾಗಿದೆ ”ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ತಿಳಿಸಿದ್ದರು.
28 ಅಡಿ ಉದ್ದದ ಹಾಲೋಗ್ರಾಮ್ ಪ್ರತಿಮೆಯನ್ನು ಮೇಲಾವರಣದ ಅಡಿಯಲ್ಲಿ ಸ್ಥಾಪಿಸಲಾಗುವುದು, ಹಿಂದೆ ಇಲ್ಲಿ ಕಿಂಗ್ ಜಾರ್ಜ್ V ಪ್ರತಿಮೆ ಇತ್ತು. ಅದನ್ನು 1968 ರಲ್ಲಿ ತೆಗೆದುಹಾಕಲಾಗಿತ್ತು” ಎಂಬ ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.