ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.
ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಅಳಿಲುಸೇವೆಯ ಮೂಲಕ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯವು ನನ್ನದಾಗಿದೆ.
ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೇವಲ ಒಂದೇ ಜಿಲ್ಲೆ ಅಲ್ಲ. ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ. ಈ ಮಹಿಳಾ ವಿಶ್ವ ವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿಯವರಿಗೆ ಗೌರವ ಸಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷದ ಸರ್ಕಾರಕ್ಕೆ ಸಲ್ಲುತ್ತದೆ.
ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರೂ ಹರಡಬಾರದು ಮತ್ತು ಇಂತಹ ಸುಳ್ಳುವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಈ ಮೂಲಕ ವಿನಂತಿಸುವೆ ಎಂದು ಸಚಿವರು ಹೇಳಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಭಾಗದ ಹೆಣ್ಣುಮಕ್ಕಳು ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ.(1/2) pic.twitter.com/AeRtHVDnyY
— Govind M Karjol (@GovindKarjol) January 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.