ಬೆಂಗಳೂರು : ಬಸವಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಸಭೆ ನಡೆಸಿದರು.
ಅನುಭವ ಮಂಟಪದ ಪ್ರಾತ್ಯಕ್ಷಿಕೆಯನ್ನು ಸಿಎಂ ವೀಕ್ಷಣೆ ಮಾಡಿದರು.
ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪವು ಸದಾ ಚಟುವಟಿಕೆಯಿಂದ ಕೂಡಿದ್ದು, ವಿಚಾರ ಮಂಥನ ನಡೆಯುತ್ತಿತ್ತು. ಪ್ರಸ್ತುತ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿಯೂ ನಿರಂತರ ಚಟುವಟಿಕೆಗಳನ್ನು ನಡೆಸಲು ಪೂರಕವಾಗಿ ಸುಸಜ್ಜಿತ ಸಭಾಂಗಣಗಳು ಮತ್ತು ಇತರ ಮೂಲಸೌಕರ್ಯಗಳನ್ನು ಸೃಷ್ಟಿಸುವಂತೆ ಸೂಚನೆ ನೀಡಿದರು.
ಇದಲ್ಲದೆ ಮಕ್ಕಳಿಗೆ ಹಿಂದಿನ ಅನುಭವ ಮಂಟಪ ಹೇಗಿತ್ತು ಎಂಬ ಅರಿವು ಮೂಡಿಸುವ ರೀತಿಯಲ್ಲಿ ಇದನ್ನು ನಿರ್ಮಿಸಬೇಕು. ಜೊತೆಗೆ ಸುಸಜ್ಜಿತವಾದ ಡಿಜಿಟಲ್ ಲೈಬ್ರರಿ, ಹಾಲೋಗ್ರಾಫಿಕ್ ಪ್ರದರ್ಶನ ಮೊದಲಾದ ವ್ಯವಸ್ಥೆಗಳನ್ನು ರೂಪಿಸುವ ಮೂಲಕ ಅನುಭವ ಮಂಟಪದ ಅನುಭವ ಜನರಿಗೆ ಆಗುವಂತೆ ಮಾಡಬೇಕು. ಕನಿಷ್ಠ 200 ಜನ ಕುಳಿತುಕೊಳ್ಳುವ ಎರಡು ಸಭಾಂಗಣ ನಿರ್ಮಾಣ ಮಾಡಿ ಎಂದು ಸೂಚಿಸಿದರು.
ದಿನದ 24 ಗಂಟೆ ಕಾಲ ವಿದ್ಯುತ್ ಪೂರೈಕೆ ಇರುವಂತೆ ನೋಡಿಕೊಳ್ಳಿ. ಕಟ್ಟಡದ ಗುಣಮಟ್ಟ ಉತ್ಕೃಷ್ಟ ವಾಗಿ ಇರಲಿ. ಅನುಭವ ಮಂಟಪದ ಸುರಕ್ಷತೆ ಮತ್ತು ನಿರ್ವಹಣೆ ಬಗ್ಗೆ ಆದ್ಯತೆ ನೀಡುವಂತೆ ಹಾಗೂ ಯೋಜನೆಯ ಭಾಗವಾಗಿ ಪರಿಗಣಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.