ನವದೆಹಲಿ: ಇಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತಿದೆ. ದೇಶದ ವೈವಿಧ್ಯತೆಯನ್ನು ಆಚರಿಸಲು ಪ್ರತಿ ವರ್ಷ ಜನವರಿ 25 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಥೀಮ್ ʼಗ್ರಾಮೀಣ ಮತ್ತು ಸಮುದಾಯ ಕೇಂದ್ರಿತ ಪ್ರವಾಸೋದ್ಯಮʼ ಎಂಬುದಾಗಿದೆ.
ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿಯೂ ಭಾರತದಲ್ಲಿ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ.
ವಿಶ್ವಾದ್ಯಂತ ಪ್ರವಾಸಿ ತಾಣಗಳೆಂದು ಪ್ರಸಿದ್ಧವಾಗಿರುವ ಭವ್ಯವಾದ ಸ್ಥಳಗಳನ್ನು ಹೊಂದುವ ಮೂಲಕ ಭಾರತವು ಪ್ರವಾಸೋದ್ಯಮ ವಲಯದಲ್ಲಿ ಗಮನಾರ್ಹ ಸ್ಥಾನವನ್ನು ಹೊಂದಿದೆ. ಭಾರತವು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುವ ಸಾಂಸ್ಕೃತಿಕವಾಗಿ ಶ್ರೀಮಂತ ಪರಂಪರೆಯನ್ನು ಹೊಂದಿದೆ.
ಈ ಬಾರಿ ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಡಿಯಲ್ಲಿ ದೇಶದಲ್ಲಿ ಆಚರಿಸಲಾಗುತ್ತಿದೆ. ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಗುರುತಿಸಲು ಪ್ರಧಾನಿ ಮೋದಿ ಅವರು ಪ್ರಾರಂಭಿಸಿದ 75 ವಾರಗಳ ದೀರ್ಘಾವಧಿಯ ದೊಡ್ಡ ಆಚರಣೆಯೇ ಆಜಾದಿ ಕಾ ಅಮೃತ್ ಮಹೋತ್ಸವ್.
India’s rich cultural diversity makes it one of the most fascinating tourist destinations. A trip to its beautiful landscapes, wildlife & heritage gives the unforgettable experience of a lifetime. #NationalTourismDay #AmritMahotsav pic.twitter.com/ptANTWIQgC
— Ministry of Culture (@MinOfCultureGoI) January 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.