ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ವರ್ಚುವಲ್ ಆಗಿ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ ಮೋದಿ ಅವರು ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಪದಾಧಿಕಾರಿಗಳಿಗೆ ಪ್ರಮುಖ ಮಾರ್ಗದರ್ಶನಗಳನ್ನು ನೀಡಿದ್ದಾರೆ.
ಅಲ್ಲದೇ ಇಂದು ರಾಷ್ಟ್ರೀಯ ಮತದಾರರ ದಿನದ ಸಂದರ್ಭದಲ್ಲಿ ಮೋದಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಪಕ್ಷದ ಕಾರ್ಯಕರ್ತರಿಂದ ಸಲಹೆಗಳನ್ನು ಅವರು ಕೇಳಿದ್ದಾರೆ.
ರಾಜ್ಯಾದ್ಯಂತ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಂವಾದದಲ್ಲಿ ಪಾಲ್ಗೊಂಡಿದ್ದಾರೆ.
ಕಳೆದ ಎರಡು ದಶಕಗಳಿಂದ ಗುಜರಾತ್ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಈ ವರ್ಷ ಡಿಸೆಂಬರ್ನಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
ಪೂರ್ವ ನೋಂದಣಿ ಪ್ರಕ್ರಿಯೆಯ ನಂತರ NaMo ಅಪ್ಲಿಕೇಶನ್ನಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಸಂವಾದವನ್ನು ನಡೆಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.