ನವದೆಹಲಿ: 2022ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ನಿನ್ನೆ ರಾತ್ರಿ ಪ್ರಕಟಿಸಲಾಗಿದ್ದು, ಕರ್ನಾಟಕದ ನಾಲ್ವರಿಗೆ ಪ್ರಶಸ್ತಿ ಒಲಿದಿದೆ. ಕನ್ನಡದ ಹಿರಿಯ ಸಾಹಿತಿ, ದಲಿತ ಕವಿ ದಿ. ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಗೌರವ ಒಲಿದಿದೆ.
ಕಲಾ ವಿಭಾಗದಲ್ಲಿ ಹೆಚ್.ಆರ್ ಕೇಶವಮೂರ್ತಿ, ವಿಜ್ಞಾನ ವಿಭಾಗದಲ್ಲಿ ಸುಬ್ಬಣ್ಣ ಅಯ್ಯಪ್ಪಗೆ, ಕೃಷಿ ಕ್ಷೇತ್ರದಲ್ಲಿ ಅಮೈ ಮಹಾಲಿಂಗ ನಾಯ್ಕ್ಗೆ, ಕೃಷಿ ಸಂಶೋಧನೆಗಾಗಿ ಅಬ್ದುಲ್ ಖಾದರ್ ನಡಕಟ್ಟಿ ಅವರಿಗೆ ಪದ್ಮಶ್ರೀ ಒಲಿದಿದೆ.
ಒಟ್ಟು 128 ಮಂದಿಗೆ ಈ ಬಾರಿ ಪದ್ಮ ಪ್ರಶಸ್ತಿ ಘೋಷಣೆಯಾಗಿದೆ. ಪ್ರಮುಖವಾಗಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ವಿಕ್ಟರಿ ಬ್ಯಾನರ್ಜಿ, ನಟರಾಜನ್ ಚಂದ್ರಶೇಖರನ್, ನೀರಜ್ ಛೋಪ್ರಾ, ಕೃಷ್ಣ ಎಲ್ಲಾ, ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲ ಅವರಿಗೆ ಪದ್ಮ ಒಲಿದಿದೆ. ಅಗಲಿದ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ದೊರೆತಿದೆ.
ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಗಿದ್ದು, ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆ ಗುರುತಿಸಿ ಈ ಗೌರವ ನೀಡಲಾಗುತ್ತಿದೆ. 2022ನೇ ಸಾಲಿನ ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.
Govt announces Padma Awards 2022
CDS Gen Bipin Rawat to get Padma Vibhushan (posthumous), Congress leader Ghulam Nabi Azad to be conferred with Padma Bhushan pic.twitter.com/Qafo6yiDy5
— ANI (@ANI) January 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.