ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯರು ದೇಶದ ನಾಗರಿಕರಿಗೆ 73ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ ಟ್ವಿಟ್ ಮಾಡಿ, “ನಿಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್” ಎಂದಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿ, “ಇದು ನಮ್ಮ ಪ್ರಜಾಪ್ರಭುತ್ವವನ್ನು ಆಚರಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ವಿಚಾರಗಳು ಮತ್ತು ಮೌಲ್ಯಗಳನ್ನು ಗೌರವಿಸುವ ಸಂದರ್ಭವಾಗಿದೆ. ನಮ್ಮ ದೇಶದ ನಿರಂತರ ಪ್ರಗತಿ ಮತ್ತು ಸಮೃದ್ಧಿಗಾಗಿ ನನ್ನ ಪ್ರಾರ್ಥನೆ” ಎಂದಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಟ್ವಿಟ್ ಮಾಡಿ, “ಭಾರತೀಯ ಗಣರಾಜ್ಯದ ಹೆಮ್ಮೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಸೈನಿಕರಿಗೆ ನಮನ. ಸ್ವಾತಂತ್ರ್ಯದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ತಮ್ಮ ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿಯೊಬ್ಬರೂ ಇಂದು ಪ್ರತಿಜ್ಞೆ ಮಾಡಬೇಕು” ಎಂದು ಕರೆ ನೀಡಿದ್ದಾರೆ.
आप सभी को गणतंत्र दिवस की हार्दिक शुभकामनाएं। जय हिंद!
Wishing you all a happy Republic Day. Jai Hind! #RepublicDay
— Narendra Modi (@narendramodi) January 26, 2022
Greetings and warm wishes to the citizens of India on the occasion of 73rd #RepublicDay.
This is an occasion to celebrate our democracy and cherish the ideas and values enshrined in our Constitution.
Praying for the continued progress and prosperity of our country.
— Rajnath Singh (@rajnathsingh) January 26, 2022
सभी को 73वें गणतंत्र दिवस की शुभकामनाएं।
भारतीय गणतंत्र के गौरव, एकता व अखंडता को अक्षुण्ण बनाए रखने के लिए अपना सर्वस्व अर्पण करने वाले सभी जवानों को नमन करता हूँ।
आइए आज हम सभी स्वाधीनता के लोकतांत्रिक मूल्यों के प्रति अपनी प्रतिबद्धता सुनिश्चित करने का संकल्प लें।
जय हिन्द! pic.twitter.com/jujYZVCn3C
— Amit Shah (@AmitShah) January 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.