ವಾಷಿಂಗ್ಟನ್: ಭಾರತ 73ನೇ ಗಣರಾಜ್ಯೋತ್ಸವವನ್ನು ಇಂದು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಭಾರತದ ನಾಗರಿಕರಿಗೆ ಶುಭಾಶಯ ಕೋರಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಎರಡೂ ರಾಷ್ಟ್ರಗಳು ಜವಾಬ್ದಾರಿಯನ್ನು ಹಂಚಿಕೊಂಡಿವೆ ಎಂದಿದೆ.
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದೊಂದಿಗೆ ಈ ಸಮಯದಲ್ಲಿ ಜೊತೆಯಲ್ಲಿರುತ್ತೇವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನಕ್ಕೆ ಭೇಟಿ ನೀಡಿದಾಗ ಅಧ್ಯಕ್ಷ ಜೋ ಬೈಡನ್ ‘ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವು ಮತ್ತಷ್ಟು ಗಟ್ಟಿಯಾಗಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಜಗತ್ತಿಗೇ ಒಳಿತಾಗಲಿದೆ ಎಂದಿದ್ದರು’ ಎಂದು ಜೆನ್ ಸಾಕಿ ಸ್ಮರಿಸಿದ್ದಾರೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ನಮ್ಮ ಹಂಚಿಕೆಯ ಜವಾಬ್ದಾರಿಯಲ್ಲಿ ಎರಡೂ ರಾಷ್ಟ್ರಗಳ ಪಾಲುದಾರಿಕೆ ಬೇರೂರಿದೆ ಎಂದಿದ್ದಾರೆ.
ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ನ ದಕ್ಷಿಣ ಮತ್ತು ಮಧ್ಯ ಏಷ್ಯಾ ಬ್ಯೂರೋ ಟ್ವೀಟ್ ಮಾಡಿ, ‘ಭಾರತದ 73ನೇ ಗಣರಾಜ್ಯೋತ್ಸವದ ಶುಭಾಶಯಗಳು. ಕೋಟ್ಯಂತರ ಭಾರತೀಯರು ಈ ದಿನವನ್ನು ಆಚರಿಸುತ್ತಿದ್ದಾರೆ. ಎರಡೂ ರಾಷ್ಟ್ರಗಳ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಎರಡೂ ರಾಷ್ಟ್ರಗಳ ಸಹಕಾರವನ್ನು ನಾವು ಈ ವೇಳೆ ನೆನಪಿಸಿಕೊಳ್ಳುತ್ತೇವೆ’ ಎಂದಿದೆ.
ಅಮೆರಿಕನ್ ಕಾಂಗ್ರೆಸ್ ಸದಸ್ಯರು ಕೂಡ ಗಣರಾಜ್ಯೋತ್ಸವಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.