ಡೆಹ್ರಾಡೂನ್: ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ದೊಡ್ಡ ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಉಚ್ಛಾಟನೆಗೊಂಡ ಕೆಲ ಹೊತ್ತಿನ ಬಳಿಕ ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಉಪಾಧ್ಯಾಯ ಅವರು ಇಂದು ಬೆಳಗ್ಗೆ ಡೆಹ್ರಾಡೂನ್ನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದರು.
ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮುನ್ನ ಸುದ್ದಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಾನು ಈಗ ಹೊಸದನ್ನು ಮಾಡುವ, ಮಾತನಾಡುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.
ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಉಪಾಧ್ಯಾಯ, “ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಉತ್ತರಾಖಂಡದ ಅಭಿವೃದ್ಧಿ ಮಾತ್ರ ಸಾಧ್ಯ ಎಂದು ನಾನು ಭಾವಿಸುತ್ತೇನೆ ಮತ್ತು ಉತ್ತರಾಖಂಡವನ್ನು ಉತ್ತಮ ರಾಜ್ಯವಾಗಿಸಲು ನಾನು ಕೆಲಸ ಮಾಡಲು ಬಯಸುತ್ತೇನೆ” ಎಂದು ಹೇಳಿದರು.
“ತೆಹ್ರಿ ಮತ್ತು ಉತ್ತರಕಾಶಿಯಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ಮಾಡಿದ ಕೆಲಸಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಬಿಜೆಪಿಯ ಭಾಗವಾಗಲು ನನಗೆ ಈ ಅವಕಾಶವನ್ನು ನೀಡಿದ ಪ್ರಹ್ಲಾದ್ ಜೋಶಿ ಅವರಿಗೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದ್ದಾರೆ.
Former Congress Chief of Uttarakhand, Kishore Upadhyay joins Bharatiya Janata Party in Dehradun, ahead of #UttarakhandElection2022 pic.twitter.com/4WitzYODXC
— ANI UP/Uttarakhand (@ANINewsUP) January 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.