ನವದೆಹಲಿ: ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದಡಿಯಲ್ಲಿ ದೇಶದಲ್ಲಿ ಇದುವರೆಗೆ 165 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 56 ಲಕ್ಷ 72 ಸಾವಿರಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶವು ಎರಡು ಲಕ್ಷ 35 ಸಾವಿರ ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ. ಪ್ರಸ್ತುತ, ಭಾರತದ ಸಕ್ರಿಯ ಪ್ರಕರಣ 20 ಲಕ್ಷದ 4 ಸಾವಿರದ 333 ಆಗಿದೆ. ಕಳೆದ 24 ಗಂಟೆಗಳಲ್ಲಿ ಮೂರು ಲಕ್ಷ 35 ಸಾವಿರಕ್ಕೂ ಹೆಚ್ಚು ಕೋವಿಡ್ ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು ರಾಷ್ಟ್ರೀಯ ಚೇತರಿಕೆ ದರವು ಶೇಕಡಾ 93.89 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಇದುವರೆಗೆ 3 ಕೋಟಿ 83 ಲಕ್ಷಕ್ಕೂ ಹೆಚ್ಚು ರೋಗಿಗಳು ಕೋವಿಡ್-19 ನಿಂದ ಚೇತರಿಸಿಕೊಂಡಿದ್ದಾರೆ.
ಇದುವರೆಗೆ 72 ಕೋಟಿ 57 ಲಕ್ಷಕ್ಕೂ ಹೆಚ್ಚು ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 17 ಲಕ್ಷ 59 ಸಾವಿರಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.
ಈ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಯಾತ್ಮಕ ನಾಯಕತ್ವದಲ್ಲಿ ಕೋವಿಡ್-19 ವಿರುದ್ಧ ರಾಷ್ಟ್ರವು ಸಾಮೂಹಿಕ ಹೋರಾಟ ನಡೆಸುತ್ತಿದೆ, ಈಗ ದೇಶವು 165 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳ ಬಲವಾದ ರಕ್ಷಣೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.