ಬೆಂಗಳೂರು : ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ( impact assessment) ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇಂದು ಮಾತನಾಡುತ್ತಿದ್ದರು.
ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು.
ಆಹಾರ ಕರ್ನಾಟಕ ನಿಯಮಿತ ಫುಡ್ ಪಾರ್ಕ್ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂ.ಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆಯ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ವಿಧಾನ ಪರಿಷತ್ ಸದಸ್ಯ ವೈ.ಯೇ. ನಾರಾಯಣಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಆಹಾರ ಕರ್ನಾಟಕ ನಿಯಮಿತದ ಅಧ್ಯಕ್ಷ ಡಾ: ಐ.ಎಸ್. ಪ್ರಸಾದ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSBommai ಅಧ್ಯಕ್ಷತೆಯಲ್ಲಿ ಇಂದು ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆ ಜರುಗಿತು.
ಕೃಷಿ ಸಚಿವ @bcpatilkourava, ಸಂಸದ @shivkumarudasi, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ,
1/2 pic.twitter.com/OMW0dxhGZm— CM of Karnataka (@CMofKarnataka) January 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.