ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವ ಮೂಲಕ ಬಜೆಟ್ ಅಧಿವೇಶನವನ್ನು ಅಧಿಕೃತವಾಗಿ ಉದ್ಘಾಟಿಸಿದರು. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವಲ್ಲಿ ವೈದ್ಯರು ಮತ್ತು ಮುಂಚೂಣಿಯ ಕಾರ್ಯಕರ್ತರ ಕೆಲಸವನ್ನು ರಾಷ್ಟ್ರಪತಿಗಳು ಶ್ಲಾಘಿಸಿದರು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಕಾರ್ಯಕ್ರಮವು ರೋಗದ ವಿರುದ್ಧದ ಹೋರಾಟದಲ್ಲಿ ಭಾರತದ ಸಾಮರ್ಥ್ಯಕ್ಕೆ ಪುರಾವೆಯಾಗಿದೆ ಎಂದು ಹೇಳಿದರು.
“ನಾವು ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ 1.5 ಬಿಲಿಯನ್ ಡೋಸ್ ಕೋವಿಡ್ ಲಸಿಕೆಗಳನ್ನು ನೀಡಿದ್ದೇವೆ. ಮೇಡ್ ಇನ್ ಇಂಡಿಯಾ ಕೋವಿಡ್ -19 ಲಸಿಕೆಗಳು ಇಡೀ ಜಗತ್ತನ್ನು ಸಾಂಕ್ರಾಮಿಕ ರೋಗದಿಂದ ಮುಕ್ತಗೊಳಿಸುವಲ್ಲಿ ಮತ್ತು ಕೋಟ್ಯಂತರ ಜನರ ಜೀವಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ” ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದರು.
“ಪ್ರತಿಶತ 70 ಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ನೀಡಲಾಗಿದೆ” ಎಂದರು.
ರೂ 64,000 ಕೋಟಿಯ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಭವಿಷ್ಯದಲ್ಲಿ ಆರೋಗ್ಯ ಬಿಕ್ಕಟ್ಟಿಗೆ ದೇಶವನ್ನು ಸಿದ್ಧಪಡಿಸುತ್ತದೆ ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದರು.
“ಡಾ.ಬಿ.ಆರ್. ಅಂಬೇಡ್ಕರ್ ಅವರು ಆದರ್ಶ ಸಮಾಜವು ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮರಸ್ಯವನ್ನು ಆಧರಿಸಿದೆ ಎಂದು ಹೇಳಿದ್ದರು. ಪ್ರಜಾಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ, ಪ್ರಜಾಪ್ರಭುತ್ವದ ಮೂಲವು ಜನರನ್ನು ಗೌರವಿಸುವ ಭಾವನೆಯಾಗಿದೆ. ನನ್ನ ಸರ್ಕಾರವು ಬಾಬಾಸಾಹೇಬರ ಆದರ್ಶಗಳನ್ನು ತನ್ನ ಮಾರ್ಗದರ್ಶಿ ಸೂತ್ರವೆಂದು ಪರಿಗಣಿಸುತ್ತದೆ” ಎಂದು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಹೇಳಿದರು.
“ಮಹಿಳಾ ಸಬಲೀಕರಣವು ನನ್ನ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ಉಜ್ವಲ ಯೋಜನೆಯ ಯಶಸ್ಸಿಗೆ ನಾವೇ ಸಾಕ್ಷಿಗಳು. ಮುದ್ರಾ ಯೋಜನೆಯ ಮೂಲಕ ಮಹಿಳೆಯರ ಉದ್ಯಮಶೀಲತೆ ಮತ್ತು ಕೌಶಲ್ಯಗಳು ಉತ್ತೇಜನವನ್ನು ಪಡೆದಿವೆ. ‘ಬೇಟಿ ಬಚಾವೋ, ಬೇಟಿ ಪಢಾವೋ’ ಮೂಲಕ ಅನೇಕ ಸಕಾರಾತ್ಮಕ ಫಲಿತಾಂಶಗಳು ಮುನ್ನೆಲೆಗೆ ಬಂದಿವೆ” ಎಂದು ಅವರು ಹೇಳಿದರು.
ರೈತರ ಅನುಕೂಲಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾತನಾಡಿದ ಕೋವಿಂದ್, ಕೇಂದ್ರವು 433 ಲಕ್ಷ ಮೆಟ್ರಿಕ್ ಟನ್ಗೂ ಹೆಚ್ಚು ಗೋಧಿಯನ್ನು ಖರೀದಿ ಮಾಡಿದ್ದು, ಇದರಿಂದ 50 ಲಕ್ಷಕ್ಕೂ ಹೆಚ್ಚು ರೈತರಿಗೆ ಪ್ರಯೋಜನವಾಗಿದೆ ಎಂದು ಹೇಳಿದರು.
ಕೃಷಿ ಕ್ಷೇತ್ರದಲ್ಲಿಯೂ ದೊಡ್ಡ ಬದಲಾವಣೆಗಳಾಗಿವೆ ಎಂದು ಹೇಳಿದರು. “ಪಿಎಂ-ಕಿಸಾನ್ ಮೂಲಕ 11 ಕೋಟಿಗೂ ಹೆಚ್ಚು ರೈತ ಕುಟುಂಬಗಳು ರೂ 1.80 ಲಕ್ಷ ಕೋಟಿ ಪಡೆದಿವೆ” ಎಂದು ಅವರು ಹೇಳಿದರು. ಸರ್ಕಾರಕ್ಕೆ ಸಣ್ಣ ರೈತರಿಗೆ ಆದ್ಯತೆ ನೀಡಲಾಗಿದೆ ಎಂದರು.
ಮಹಿಳೆಯರ ಮದುವೆಯ ವಯಸ್ಸನ್ನು ಹೆಚ್ಚಿಸುವುದು, ತ್ರಿವಳಿ ತಲಾಖ್ ಕಾನೂನು ರದ್ಧತಿ ಮತ್ತು ಸ್ಟಾರ್ಟ್ಅಪ್ಗಳಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೈಗೊಂಡ ಕ್ರಮಗಳನ್ನು ಸಹ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.
ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 11 ರವರೆಗೆ ಮತ್ತು ಮಾರ್ಚ್ 13 ರಿಂದ ಏಪ್ರಿಲ್ 8 ರವರೆಗೆ ಎರಡು ಭಾಗಗಳಲ್ಲಿ ನಡೆಯಲಿದೆ. ಅಧಿವೇಶನದ ಮೊದಲ ದಿನವಾದ ಇಂದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡನೇ ದಿನ ಆರ್ಥಿಕ ಸಮೀಕ್ಷೆ ಮತ್ತು ನಾಳೆ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.