ಬೆಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಚೆಕ್ ಮೂಲಕ ಪರಿಹಾರ ಧನ ವಿತರಿಸಿದರು.
ಒಟ್ಟು 95 ಬಿಪಿಎಲ್ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿಯಂತೆ ಪರಿಹಾರದ ಚೆಕ್ ಅನ್ನು ಬಸವರಾಜ ಬೊಮ್ಮಾಯಿ ಅವರು ವಿತರಿಸಿದರು.
ಕೆ.ಅರ್.ಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ(ಬೈರತಿ) ಕಾರ್ಯಕ್ರಮದ ಜವಾಬ್ದಾರಿ ವಹಿಸಿದ್ದರು.
ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವರಾದ ಡಾ.ಕೆ ಸುಧಾಕರ್, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಎಚ್.ಎಸ್ ಗೋಪಿನಾಥ್ ರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಹಲ ಗಣ್ಯರು ಅಧಿಕಾರಿ ವರ್ಗದವರು ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.