ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಮುಖ ಅಂಗಗಳಲ್ಲಿನ ಕೊರತೆಗಳೂ ಇಡೀ ಶೈಕ್ಷಣಿಕ ವಲಯವನ್ನೇ ಬಲಿಪಶು ಮಾಡುತ್ತಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ, ಶಿಕ್ಷಣಕ್ಕಿರುವ ಪ್ರೋತ್ಸಹ ಹಾಗೂ ಸೌಲಭ್ಯಗಳ ಬಗ್ಗೆ ಸಂಪೂರ್ಣ ನಂಬಿಕೆ ಇಲ್ಲದಂತಾಗಿದೆ. ಏಕೆಂದರೆ ಯಾವ ರಾಜ್ಯ ಸರಕಾರ ವಿದ್ಯಾರ್ಥಿಗಳ ಪರವಾಗಿ ಯೋಜನೆಗಳನ್ನ ಸಮಪರ್ಕವಾಗಿ ಜಾರಿಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಬೇಕೊ, ಅದನ್ನು ಸಂಪೂರ್ಣವಾಗಿ ಮರೆತು ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದು ಹೇಳಿದೆ.
ರಾಜ್ಯದಲ್ಲಿ ಪ್ರಮುಖವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಜಾರಿಯಲ್ಲಿ ಲೋಪ, ಎಸ್ಸಿ/ಎಸ್ಟಿ ವಿದ್ಯಾರ್ಥಿ ವೇತನ ಬಿಡುಗಡೆಯಲ್ಲಿ ವಿಳಂಬ, ಹಾಸ್ಟೆಗಳ ಮೂಲಭೂತ ಸೌಲಭ್ಯಗಳಲ್ಲಿ ಕೊರತೆ ಹಾಗೂ ಸರಕಾರಿ ಕಾಲೇಜುಗಳ ಮೂಲಭೂತ ಸೌಕರ್ಯಗಳ ವದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರಕಾರದ ನಡೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸಿದೆ.
ಹಿಂದುಳಿದ, ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಹಾಗೂ ವಿದ್ಯಾರ್ಥಿ ವೇತನ ಸಮಸ್ಯೆ : ಈ ರಾಜ್ಯದಲ್ಲಿರುವ ಹಿಂದುಳಿದ ವರ್ಗ, ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿಯ ಸಮರ್ಪಕವಾಗಿ ಜಾರಿಯಾಗದೇ ರಾಜ್ಯದ ಲಕ್ಷಾಂತರ ಬಡ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪಥವನ್ನೇ ತೊರೆಯುತ್ತಿದ್ದು ರಾಜ್ಯದ ಹಿಂದುಳಿದ ವಿದ್ಯಾರ್ಥಿಗಳ ಪಾಲಿಗೆ ಕರಾಳ ಛಾಯೆಯಾಗಿ ಮಾರ್ಪಾಡಾಗಿದೆ ಇದನ್ನು ಅಭಾವಿಪ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಕಳೆದ ಎರಡು ವರ್ಷದ ವಿದ್ಯಾರ್ಥಿ ವೇತನ ಈವರೆಗೂ ಬಹುತೇಕ ವಿದ್ಯಾರ್ಥಿಗಳಿಗೆ ತಲುಪಿಲ್ಲ. ಅಂತೆಯೇ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಸೌಲಭ್ಯವನ್ನು ವಿದ್ಯಾರ್ಥಿಯ ಪ್ರವೇಶ ಸಂಧಂರ್ಭದಲ್ಲಿಯೇ ನೀಡಿ ವಿದ್ಯಾರ್ಥಿಯಿಂದ ಭೋದನಾ ಶುಲ್ಕ, ಪರೀಕ್ಷಾ ಶುಲ್ಕ, ಕ್ರೀಡಾ ಶುಲ್ಕ, ಗ್ರಂಥಾಲಯ ಶುಲ್ಕ , ಸೇವಾ ಶುಲ್ಕಗಳನ್ನು ಹೊರತು ಪಡಿಸಿ ಪ್ರವೇಶ ನೀಡಬೇಕು.
ಆದರೆ ರಾಜ್ಯದ ಬಹುತೇಕ ಎಲ್ಲಾ ಕಾಲೇಜುಗಳು ಸರಕಾರಿ ಆದೇಶವನ್ನು ಗಾಳಿಗೆ ತೂರಿ ವಿದ್ಯಾರ್ಥಿಗಳನ್ನು ಬೇದರಿಸಿ ಹಣ ವಸೂಲಿಗೆ ನಿಂತಿರುವುದು ರಾಜ್ಯ ಸರಕಾರದ ಆಡಳಿತಕ್ಕೆ ಹಿಡಿದಿರುವ ಕೈಗನ್ನಡಿಯಾಗಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂಬಂಧಪಟ್ಟ ಇಲಾಖೆಯು ಕಾಲೇಜುಗಳ ವಿರುದ್ಧ ಕ್ರಮಕ್ಕೆ ಮುಂದಾಗದೇ ಇರುವುದು ದುರದೃಷ್ಟಕರ. ಆದ್ದರಿಂದ ತಕ್ಷಣವೇ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮವನ್ನು ಕೈಗೊಂಡು ಶುಲ್ಕ ವಿನಾಯಿತಿ ನಿಯಮವನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಹಾಗೂ ಎಸ್.ಸಿ/ಎಸ್.ಟಿಯ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ವಿದ್ಯಾರ್ಥಿಗಳನ್ನು ಆಗ್ರಹಿಸುತ್ತದೆ.
ರಾಜ್ಯದ ಹಾಸ್ಟೆಲ್ಗಳಿಗೆ ಸಮರ್ಪಕ ಸೌಲಭ್ಯ ಅನಿವಾರ್ಯ : ಕರ್ನಾಟಕ ರಾಜ್ಯದಲ್ಲಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ, ಅನ್ನ-ಅಕ್ಷರಗಳ ದಾಸೋಹಗಳಾಗಲೆಂದು ಪ್ರಾರಂಭಿಸಿದ ಹಾಸ್ಟೆಲ್ಗಳು ಇಂದು ತೀವ್ರ ನಿಗಾ ಘಟಕಗಳನ್ನು ಸೇರಿ ದಶಕಗಳೇ ಕಳೆದಿವೆ, ಆದರೆ ಇದಕ್ಕೆ ಶಾಶ್ವತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ. ಸದ್ಯ ರಾಜ್ಯ ಸರಕಾರ ಅಹಿಂದ ಸಿದ್ದಾಂತದ ಮೇಲೆಯೇ ಅಧಿಕಾರಕ್ಕೆ ಬಂದಿದ್ದರೂ ಅಹಿಂದ ವಿದ್ಯಾರ್ಥಿ ನಿಲಯಗಳಿಗೆ ಇನ್ನೂ ಉತ್ತಮ ಹಾಸ್ಟೆಲ್ ಭಾಗ್ಯ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಹಾಸ್ಟೆಲ್ಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲತೆಯನ್ನು ಹೊಂದಿದ್ದು, ಈ ಬಗ್ಗೆ ತಕ್ಷಣವೇ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿ, ಸರ್ವೇಕ್ಷಣೆ ನಡೆಸಿ ಪರಿಹಾರಕ್ಕೆ ಮುಂದಾಗಬೇಕು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ಹಾಸ್ಟೆಲ್ಗಳಿಗೆ ಒದಗಿಸಿದಂತಹ ಹಾಸಿಗೆ ದಿಂಬು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಅವರ ಮೇಲೆ ವಿದ್ಯಾರ್ಥಿ ಸಮುದಾಯ ಇಟ್ಟಿದ್ದಂತಹ ಭರವಸೆ ಮತ್ತು ನಂಬಿಕೆಗೆ ದ್ರೋಹ ಮಾಡಿದ್ದಾರೆ. ಇನ್ನಾದರೂ ತಕ್ಷಣವಾಗಿ ಜಾಗೃತವಾಗಿ ಹಾಸ್ಟೆಲ್ಗಳ ಸುಧಾರಣೆಗೆ ಒತ್ತುಕೊಟ್ಟು ರಾಜ್ಯ ಸರ್ಕಾರ ಹಾಸ್ಟೆಲ್ಗಳಲಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸ್ವಚ್ಛತೆ ಖಾಯಂ ನಿಲಯ ಪಾಲಕರ ನೇಮಕಾತಿಗೆ ಒತ್ತು ನೀಡಿ ಹಾಸ್ಟೆಲ್ಗಳಲ್ಲಿ ಶುದ್ಧ-ಸ್ವಚ್ಛ-ಸ್ವಾಸ್ಥ್ಯ ಹಾಸ್ಟೆಲ್ಗಳನ್ನಾಗಿ ಪರಿವರ್ತಿಸಬೇಕು. ಅಲ್ಲದೇ ಹಾಸ್ಟೆಲ್ಗಳಲ್ಲಿ ಗ್ರಂಥಾಲಯ ವ್ಯವಸ್ಥೆ, ಕ್ರೀಡಾ ಸಾಮಾಗ್ರಿಗಳನ್ನು ಒದಗಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಅಭಾವಿಪ ಆಗ್ರಹಿಸುತ್ತದೆ.
ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಅತ್ಯಗತ್ಯ : ರಾಜ್ಯದಲ್ಲಿ ಎಲ್ಲಾ ಖಾಸಗಿ ಕಾಲೇಜುಗಳು ದಿನೇ ದಿನೇ ಶಿಕ್ಷಣದ ವ್ಯಾಪಾರಿ ಕೇಂದ್ರಗಳಾಗಿ ಮಾರ್ಪಾಡಾಗುತ್ತಿದ್ದೆ. ಇದಕ್ಕೆ ಪ್ರಮುಖ ಕಾರಣ ರಾಜ್ಯದಲ್ಲಿರುವಂತಹ ಸರಕಾರಿ ಕಾಲೇಜುಗಳ ದುಸ್ಥಿತಿ, ರಾಜ್ಯದಲ್ಲಿ ಸರಕಾರಿ ಐ.ಟಿ.ಐ/ಪದವಿ ಪೂರ್ವ/ಪದವಿ/ಡಿಪ್ಲೋಮೋ/ಇಂಜಿನಿಯರಿಂಗ್/ವ್ಯದಕೀಯ ಕಾಲೇಜುಗಳು ಬಹುತೇಕ ಎಲ್ಲಾ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ, ಕೀಡಾ ಸಾಮಗ್ರಿಗಳು, ಭೋಧಕ, ಬೋಧಕೇತರ ಸಿಬ್ಬಂದಿ, ಭೋದಕ ಕೊಠಡಿಗಳು ಹೀಗೆ ರಾಜ್ಯ ಸರ್ಕಾರ ಅತ್ಯಂತ ಅವಶ್ಯಕವಾಗಿರುವ ಸೌಕರ್ಯಗಳಲ್ಲೇ ಕೊರತೆಯನ್ನು ಸೃಷ್ಠಿಸಿ ಇಡೀ ಸರ್ಕಾರಿ ಕಾಲೇಜುಗಳ ಶೈಕ್ಷಣಿಕ ವಾತವರಣವನ್ನು ನಿರ್ಣಾಮ ಮಾಡಿದೆ ಇದನ್ನು ಅಭಾವಿಪ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸರ್ಕಾರಿ ಕಾಲೇಜುಗಳಿಗೆ ದಾಖಲಾಗದರೂ ಈವರೆಗೆ ಖಾಯಂ ಉಪನ್ಯಾಸಕರು ನೇಮಕವಾಗದೇ ಇರುವುದರಿಂದ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವಲ್ಲಿ ವಿಫಲವಾಗಿ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಅಲ್ಲದೇ ಖಾಸಗಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯಬೇಕೆಂದರೆ ಲಕ್ಷಾಂತರ ಹಣಕೊಟ್ಟು ದಾಖಲಾಗುವಂತಹ ಸಮಸ್ಯೆ ಅನುಭವಿಸುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ತುರ್ತಾಗಿ ಅತ್ಯಂತ ಅವಶ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಅಭಾವಿಪ ಆಗ್ರಹಿಸಿದೆ.
ಬೇಡಿಕೆಗಳು:
1.ರಾಜ್ಯದ ಬಡ-ಹಿಂದುಳಿದ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ಸೌಲಭ್ಯವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು.
2. 2 ವರ್ಷಗಳಿಂದ ಬಾಕಿ ಇರುವ ಎಸ್.ಸಿ/ಎಸ್.ಟಿ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು.
3. ರಾಜ್ಯದ ಎಲ್ಲಾ ಹಾಸ್ಟೆಲ್ಗಳಲ್ಲಿ ಶುದ್ಧ, ಸ್ವಚ್ಛ, ಸ್ವಾಸ್ಥ್ಯ ಹಾಸ್ಟೆಲ್ಗಳನ್ನಾಗಿ ಪರಿವರ್ತಿಸಬೇಕು ಹಾಗೂ ಇದಕ್ಕೆ ಅವಶ್ಯವಿರುವ ವಿಶೇಷ ಅನುದಾನವನ್ನು ಕೂಡಲೇ ಬಿಡುಗಡೆಗೊಳಿಸಬೇಕು.
4. ರಾಜ್ಯದ ಹಾಸ್ಟೆಲ್ಗಳನ್ನು ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಹಾಸ್ಟೆಲ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು.
5. ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ಇದಕ್ಕೆ ಅವಶ್ಯವಿರುವ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು.
6. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಉಪನ್ಯಾಸಕರ ಹುದ್ದೆಗೆ ಕೂಡಲೇ ಭರ್ತಿ ಮಾಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.