ನವದೆಹಲಿ: ಭಾರತೀಯ ತಟ ರಕ್ಷಣಾ ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ಇಂದು ತನ್ನ 46 ನೇ ಸಂಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿದೆ.
ಭಾರತೀಯ ಕೋಸ್ಟ್ ಗಾರ್ಡ್ ತನ್ನ ದಾಸ್ತಾನುಗಳಲ್ಲಿ 158 ಹಡಗುಗಳು ಮತ್ತು 70 ವಿಮಾನಗಳನ್ನು ಹೊಂದುವ ಮೂಲಕ ಅಸಾಧಾರಣ ಶಕ್ತಿಯಾಗಿ ಬೆಳೆದಿದೆ.
ವಿಶ್ವದಲ್ಲೇ ನಾಲ್ಕನೇ ಅತಿ ದೊಡ್ಡ ಕೋಸ್ಟ್ ಗಾರ್ಡ್ ಆಗಿ, ಭಾರತದ ಕರಾವಳಿಗಳನ್ನು ಸುರಕ್ಷಿತಗೊಳಿಸುವಲ್ಲಿ ಮತ್ತು ಭಾರತದ ಕಡಲ ವಲಯಗಳಲ್ಲಿ ನಿಯಮಗಳನ್ನು ಜಾರಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಐಸಿಜಿ ಕಳೆದ ಒಂದು ವರ್ಷದಲ್ಲಿ ಸಮುದ್ರದಲ್ಲಿ 1,200ಕ್ಕೂ ಹೆಚ್ಚು ಜೀವಗಳನ್ನು ಉಳಿಸಿದೆ ಮತ್ತು ಪ್ರಾರಂಭವಾದಾಗಿನಿಂದ 11 ಸಾವಿರಕ್ಕೂ ಹೆಚ್ಚು ಜನರನ್ನು ಉಳಿಸಿದೆ.
ಭಾರತೀಯ ಕೋಸ್ಟ್ ಗಾರ್ಡ್ನ ಪ್ರಾಥಮಿಕ ಕರ್ತವ್ಯವೆಂದರೆ ಅದರ ಜವಾಬ್ದಾರಿಯ ಪ್ರದೇಶದಲ್ಲಿ ಸಮುದ್ರ ಮಾರ್ಗಗಳ ಮೂಲಕ ಕಳ್ಳಸಾಗಣೆಯನ್ನು ತಡೆಗಟ್ಟುವುದು. ಕಳೆದ ಒಂದು ವರ್ಷದಲ್ಲಿ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಮತ್ತು ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಕೋಸ್ಟ್ ಗಾರ್ಡ್ಗೆ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರಿದ್ದಾರೆ.
Best wishes to the Indian Coast Guard family on their Raising Day.
An organisation of great strategic importance, our Coast Guard is an outstanding team of professionals, who steadfastly secure our coasts and also are at the forefront of humanitarian efforts. @IndiaCoastGuard pic.twitter.com/3OiyQ1ZJfo
— Narendra Modi (@narendramodi) February 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.