ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಎನ್ಸಿಸಿ ವಿಭಾಗವು ಸಂತ ಫಿಲೋಮಿನಾ ಪ್ರೌಢ ಶಾಲೆಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ. 4ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಯೋಗ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹ ಮಾತನಾಡಿ, ಯೋಗವು ಒಂದು ಅತ್ಯಂತ ಪ್ರಾಚೀನ ಕಲೆ. ಇದು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಾಗಿದೆ. ಇಂದು ಪ್ರಪಂಚದಾದ್ಯಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಗಳಿಸಿರುವ ಯೋಗವು ನಮ್ಮ ದೇಶದಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಶಾಲಾ ಕಾಲೇಜುಗಳಲ್ಲಿ ಅಳವಡಿಸಲು ಚಿಂತನೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಓಸ್ವಾಲ್ಡ್ ರೋಡ್ರಿಗಸ್ ಮಾತನಾಡಿ, ಯೋಗವು ನಮ್ಮ ಬುದ್ಧಿ ಶಕ್ತಿಯನ್ನು ತೀಕ್ಷ್ಣಗೊಳಿಸುತ್ತದೆ. ಇದು ನಮ್ಮ ಮನೋನಿಗ್ರಹ ಮತ್ತು ಸ್ವಯಂಜಾಗೃತಿಯನ್ನು ಸುಧಾರಿಸುತ್ತದೆ. ಯೋಗವನ್ನು ಅಭ್ಯಾಸ ಮಾಡಲು ವಯಸ್ಸು, ಜಾತಿ, ಮತ, ಧರ್ಮಗಳ ಅಭ್ಯಂತರವಿಲ್ಲ. ಮಹಾವೀರ ಮತ್ತು ಬುದ್ಧ ತಮ್ಮ ಜೀವನದಲ್ಲಿ ಅಧ್ಯಾತ್ಮಿಕ ಯೋಗವನ್ನು ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ, ಸೌಹಾರ್ದತೆಯನ್ನು ಸೃಷ್ಠಿಸಿದರು ಎಂದು ಹೇಳಿದರು. ಯೋಗ ಶಿಕ್ಷಣ ತರಬೇತುದಾರರಾದ ಕುಶಾಲಪ್ಪ ಮತ್ತು ಗಿರಿಯಪ್ಪ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಜಾನ್ಸನ್ ಡೇವಿಡ್ ಸಿಕ್ವೇರಾ, ಭೂಸೇನಾ ಪ್ರಥಮಾಧಿಕಾರಿ ನರೇಶ್ ಲೋಬೊ, ನೌಕಾಪಡೆ ಅಧಿಕಾರಿ ಕ್ಲೆಮೆಂಟ್ ಪಿಂಟೊ, ವಾಯುಪಡೆ ಅಧಿಕಾರಿ ರೋಶನ್ ಸಿಕ್ವೇರಾ, ವಾಯುಪಡೆ ನಿವೃತ್ತ ಅಧಿಕಾರಿ ಶ್ರೀ ಪುರುಷೋತ್ತಮ ಉಪಸ್ಠಿತರಿದ್ದರು.
ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕ ಪ್ರೊ. ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.