ಬೆಂಗಳೂರು: ರಾಣೆಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಐದು ಎಕರೆ ಜಮೀನು ಮಂಜೂರಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಅವರು ಹಾವೇರಿ ಜಿಲ್ಲಾ ಪ್ರವಾಸದ ವೇಳೆ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಸೇರಿದಂತೆ ಹಲವು ರೇಷ್ಮೆ ಬೆಳೆಗಾರರು ಮನವಿ ಮಾಡಿದ್ದರು. ಅದರಂತೆ ರಾಣೆಬೆನ್ನೂರು ತಾಲೂಕಿನ ಕೂನಬೇವು ಗ್ರಾಮದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಇದಕ್ಕಾಗಿ ಅಗತ್ಯವಿರುವ ಜಾಗ ನೀಡುವಂತೆ ಸಚಿವ ಡಾ.ನಾರಾಯಣಗೌಡ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ರೇಷ್ಮೆ ಇಲಾಖೆಗೆ 5.1ಎಕರೆ ಭೂಮಿಯನ್ನು ರೇಷ್ಮೆ ಇಲಾಖೆಗೆ ಮಂಜೂರು ಮಾಡಿ ಹಾವೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ರಾಣೆಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಅದಕ್ಕೆ ಅಗತ್ಯವಿರುವ ಭೂಮಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಕೂನಬೇವು ಗ್ರಾಮದಲ್ಲಿ ಐದು ಎಕರೆ ಜಾಗವನ್ನು ಗುರುತಿಸಿ, ರೇಷ್ಮೆ ಇಲಾಖೆಗೆ ಮಂಜೂರು ಮಾಡಿದ್ದಾರೆ. ಇದರಿಂದ ಉತ್ತರ ಕರ್ನಾಟಕ ಭಾಗದ ರೇಷ್ಮೆ ಬೆಳೆಗಾರರಿಗೆ ಸಾಕಷ್ಟು ಅನುಕೂಲವಾಗಲಿದೆ. ಶೀಘ್ರದಲ್ಲೇ ರೇಷ್ಮೆ ಇಲಾಖೆಯ ಸುಪರ್ದಿಗೆ ಪಡೆಯಲಾಗುತ್ತದೆ. ಅಲ್ಲದೇ ರಾಣೆಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಈ ಬಾರಿಯ ಬಜೆಟ್ನಲ್ಲಿ ಘೋಷಣೆ ಮಾಡಿಸಲಾಗುತ್ತದೆ. ಆದಷ್ಟು ಬೇಗ ರೇಷ್ಮೆ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.