ನವದೆಹಲಿ: ಕೇಂದ್ರ ಬಜೆಟ್ ಅನ್ನು ಮೋದಿ ಸರಕಾರದ ದೂರದೃಷ್ಟಿಯ ಬಜೆಟ್ ಎಂದು ಕರೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದು ಭಾರತದ ಆರ್ಥಿಕತೆಯ ಪ್ರಮಾಣವನ್ನು ಬದಲಾಯಿಸುತ್ತದೆ ಮತ್ತು ದೇಶವನ್ನು ಸ್ವಾವಲಂಬಿಯಾಗಿಸುತ್ತದೆ ಎಂದು ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ರ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ ಕೂಡಲೇ ಶಾ ಅವರು ತಮ್ಮ ಅಭಿಪ್ರಾಯಗಳನ್ನು ಟ್ವಿಟ್ಟರ್ ಮೂಲಕ ವ್ಯಕ್ತಪಡಿಸಿದರು.
“ಮೋದಿ ಸರ್ಕಾರದ ಈ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ, ಇದು ಭಾರತದ ಆರ್ಥಿಕತೆಯ ಪ್ರಮಾಣವನ್ನು ಬದಲಾಯಿಸುವ ಬಜೆಟ್ ಎಂದು ಸಾಬೀತುಪಡಿಸುತ್ತದೆ. ಈ ಬಜೆಟ್ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಮತ್ತು ಹೊಸ ಭಾರತಕ್ಕೆ ಅಡಿಪಾಯವನ್ನು ಹಾಕುತ್ತದೆ. ಇದಕ್ಕಾಗಿ ನಾನು ನರೇಂದ್ರ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುತ್ತೇನೆ” ಎಂದು ಶಾ ಸರಣಿ ಟ್ವೀಟ್ಗಳಲ್ಲಿ ತಿಳಿಸಿದ್ದಾರೆ.
ಬಜೆಟ್ನ ಗಾತ್ರವನ್ನು 39.45 ಲಕ್ಷ ಕೋಟಿಗೆ ಹೆಚ್ಚಿಸುವುದು ಸಾಂಕ್ರಾಮಿಕ ದಿನಗಳಲ್ಲಿಯೂ ಸಹ ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂಬುದನ್ನು ಸೂಚಿಸುತ್ತದೆ ಎಂದು ಗೃಹ ಸಚಿವರು ಹೇಳಿದ್ದಾರೆ.
ವಿತ್ತೀಯ ಕೊರತೆಯ ಗುರಿಯನ್ನು ಶೇಕಡಾ 6.9 ರಿಂದ ಶೇಕಡಾ 6.4 ಕ್ಕೆ ಇಳಿಸುವುದು ಒಂದು ದೊಡ್ಡ ಸಾಧನೆಯಾಗಿದೆ, ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತಕ್ಕೆ ವಿತ್ತೀಯ ಕೊರತೆಯನ್ನು ಶೇಕಡಾ 4 ಕ್ಕಿಂತ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ನನಗೆ ಖಾತ್ರಿಯಿದೆ ಎಂದಿದ್ದಾರೆ.
मोदी सरकार द्वारा लाया गया ये बजट, एक दूरदर्शी बजट है, जो भारत की अर्थव्यवस्था का स्केल बदलने वाला बजट साबित होगा।
ये बजट भारत को आत्मनिर्भर बनाने के साथ स्वतंत्रता के 100वें वर्ष के नए भारत की नींव डालेगा। इसके लिए @narendramodi जी और @nsitharaman जी का अभिनंदन करता हूँ।
— Amit Shah (@AmitShah) February 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.