ನವದೆಹಲಿ: 5 ಆಗಸ್ಟ್ 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜನವರಿ 26 ರವರೆಗೆ 439 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಸರ್ಕಾರ ಬುಧವಾರ ಹೇಳಿದೆ.
ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು, ರಾಜ್ಯದಿಂದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ 541 ಭಯೋತ್ಪಾದಕ ಘಟನೆಗಳು ನಡೆದಿವೆ. ಈ ಅವಧಿಯಲ್ಲಿ 98 ನಾಗರಿಕರು ಪ್ರಾಣ ಕಳೆದುಕೊಂಡರು ಮತ್ತು 109 ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾದರು ಎಂದಿದ್ದಾರೆ.
ಈ ಘಟನೆಗಳಲ್ಲಿ ಯಾವುದೇ ಮಹತ್ವದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿಲ್ಲ, ಆದರೂ, ಸುಮಾರು5 ಕೋಟಿ 30 ಲಕ್ಷ ರೂಪಾಯಿಗಳ ಖಾಸಗಿ ಆಸ್ತಿ ಹಾನಿಯನ್ನು ಅಂದಾಜಿಸಲಾಗಿದೆ ಎಂದು ಅವರು ಹೇಳಿದರು.
5 ಆಗಸ್ಟ್ 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಲಾಯಿತು. ಅಲ್ಲದೇ ಅದನ್ನು ಎರಡು ರಾಜ್ಯಗಳಾಗಿ ವಿಭಜನೆ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.