ನವದೆಹಲಿ: ಕೋವಿಡ್ನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳನ್ನು ಬೆಂಬಲಿಸಲು ರಚಿಸಲಾದ ಮಕ್ಕಳಿಗಾಗಿನ ಪಿಎಂ ಕೇರ್ಸ್ ಯೋಜನೆಗೆ ಇದುವರೆಗೆ 3,855 ಅರ್ಜಿಗಳನ್ನು ಅನುಮೋದಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ನಿನ್ನೆ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ. ಈ ಯೋಜನೆಯನ್ನು ಆನ್ಲೈನ್ ಪೋರ್ಟಲ್ pmcaresforchildren.in ಮೂಲಕ ಪ್ರವೇಶಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಅಂತಹ ಮಕ್ಕಳ ಅರ್ಜಿಗಳನ್ನು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುತ್ತವೆ. ಕಳೆದ ತಿಂಗಳ 31ರವರೆಗೆ 6,624 ಅರ್ಜಿಗಳನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ಇರಾನಿ ಹೇಳಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ತಂದೆ-ತಾಯಿ ಅಥವಾ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳನ್ನು ಬೆಂಬಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯನ್ನು ಘೋಷಿಸಿದ್ದರು.
ಯೋಜನೆಯ ಮಾರ್ಗಸೂಚಿಗಳ ಪ್ರಕಾರ, ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳ ಸಾಂಸ್ಥಿಕವಲ್ಲದ ಆರೈಕೆಗಾಗಿ ಪ್ರತಿ ಮಗುವಿಗೆ ಹಣಕಾಸಿನ ನೆರವನ್ನು ಸರ್ಕಾರದ ವತಿಯಿಂದ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.