ಬೆಂಗಳೂರು : ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.
ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.
ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.