ನವದೆಹಲಿ: , ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಗೋರಖ್ಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯೋಗಿ ಜೊತೆಗಿದ್ದರು.
ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಐದು ವರ್ಷಗಳ ಹಿಂದೆ 2017 ರಲ್ಲಿ ಬಿಜೆಪಿಯ ರಾಧಾ ಮೋಹನ್ ದಾಸ್ ಅಗರವಾಲ್ ಅವರು ಕಾಂಗ್ರೆಸ್ನ ರಾಣಾ ರಾಹುಲ್ ಸಿಂಗ್ ಅವರನ್ನು 60,730 ಮತಗಳ ಅಂತರದಿಂದ ಸೋಲಿಸಿ ಈ ಕ್ಷೇತ್ರವನ್ನು ಗೆದ್ದಿದ್ದರು. ಗೋರಖ್ಪುರ ಸಂಸದೀಯ ಕ್ಷೇತ್ರದ ಅಡಿಯಲ್ಲಿ ಬರುವ ಗೋರಖ್ಪುರ ನಗರ ವಿಧಾನಸಭಾ ಕ್ಷೇತ್ರವು ಯೋಗಿಯ ಭದ್ರಕೋಟೆಯಾಗಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರವಿ ಕಿಶನ್ ಅವರು ಈ ಕ್ಷೇತ್ರವನ್ನು ಗೆದ್ದಿದ್ದರು.
ಯೋಗಿ ಅವರು ಗೋರಖ್ಪುರ ಲೋಕಸಭಾ ಕ್ಷೇತ್ರವನ್ನು 1998, 1999, 2004, 2009 ಮತ್ತು 2014ರಲ್ಲಿ ಸತತ ಐದು ಬಾರಿ ಗೆದ್ದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.