ಅಲಹಾಬಾದ್: ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ದಿನದಂದ ರಾಜ್ಯದ ಮದರಸಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿ ಎಂದು ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಮತ್ತು ನ್ಯಾ.ಯಶವಂತ್ ವರ್ಮಾ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದ್ದು, ಈ ನಿಟ್ಟಿನಲ್ಲಿ ಅಗತ್ಯ ನಿರ್ದೇಶನ ಜಾರಿಗೊಳಿಸುವಂತೆ ಸೂಚಿಸಿದೆ.
ಅರುಣ್ ಗೌರ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿ ಈ ಸೂಚನೆ ನೀಡಲಾಗಿದೆ. ಇತರ ಸರ್ಕಾರಿ ಕಛೇರಿಗಳಂತೆ ಆಗಸ್ಟ್ 15 ಮತ್ತು ಜನವರಿ 26ರಂದು ಮದರಸದಲ್ಲಿ ರಾಷ್ಟ್ರಧ್ವಜ ಹಾರಿಸುವುದನ್ನು ಕಡ್ಡಾಯಗೊಳಿಸಿ ಎಂದು ಇದರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.