ನವದೆಹಲಿ: ಪ್ರಸ್ತುತ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 700 ತ್ವರಿತ ವಿಶೇಷ ನ್ಯಾಯಾಲಯಗಳಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಜುಬಿನ್ ಇರಾನಿ ಹೇಳಿದ್ದಾರೆ.
ಶುಕ್ರವಾರ ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ಪೋಕ್ಸೊ ಕಾಯ್ದೆಯಡಿ ಮಕ್ಕಳು ಮತ್ತು ಅಪ್ರಾಪ್ತ ವಯಸ್ಕರ ವಿರುದ್ಧದ ಅಪರಾಧಗಳನ್ನು ಒಳಗೊಂಡ ಪ್ರಕರಣಗಳ ವಿಚಾರಣೆಗೆ ಪ್ರತ್ಯೇಕವಾಗಿ 383 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.
ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಕೇಂದ್ರ ಯೋಜನೆಗೆ ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಅರುಣಾಚಲ ಪ್ರದೇಶಗಳು ಇನ್ನೂ ಸೇರಿಲ್ಲ ಎಂದು ಅವರು ಈ ವೇಳೆ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷದ ಡಿಸೆಂಬರ್ 31ರಂತೆ ದೇಶದಲ್ಲಿ 700 ತ್ವರಿತ ವಿಶೇಷ ನ್ಯಾಯಾಲಯಗಳು ಕಾರ್ಯಾಚರಿಸುತ್ತಿವೆ ಎಂದಿದ್ದಾರೆ.
ಲೈಂಗಿಕ ಅಪರಾಧ ಪ್ರಕರಣಗಳ ವಿಚಾರಣೆ ಮತ್ತು ನ್ಯಾಯ ದಾನ ಪ್ರಕ್ರಿಯೆಗೆ ವೇಗ ನೀಡುವ ಸಲುವಾಗಿ ವಿಶೇಷ ತ್ವರಿತ ನ್ಯಾಯಾಲಯಗಳನ್ನು ಕಾರ್ಯಾರಂಭ ಮಾಡಲು ಕ್ರಮಕೈಗೊಳ್ಳುವಂತೆ ಇತ್ತೀಚಿಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮನವಿ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.