ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್ನಲ್ಲಿ 11 ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ “ಸಮಾನತೆಯ ಪ್ರತಿಮೆ” ಯನ್ನು ಉದ್ಘಾಟಿಸಿದರು. ಸಂತ ಶ್ರೀ ರಾಮಾನುಜಾಚಾರ್ಯರು ನಂಬಿಕೆ, ಜಾತಿ ಮತ್ತು ಪಂಥ ಸೇರಿದಂತೆ ಜೀವನದ ಎಲ್ಲಾ ಅಂಶಗಳಲ್ಲಿ ಸಮಾನತೆಯ ಕಲ್ಪನೆಯನ್ನು ಉತ್ತೇಜಿಸಿದ ಮಹಾನ್ ಸಂತ.
ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತು – ಈ ಐದು ಲೋಹಗಳ ಸಂಯೋಜನೆಯಾದ `ಪಂಚಲೋಹʼದಿಂದ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ ಮತ್ತು ಇದು ವಿಶ್ವದ ಅತ್ಯಂತ ಎತ್ತರದ ಲೋಹದ ಪ್ರತಿಮೆಗಳಲ್ಲಿ ಒಂದಾಗಿದೆ. ಇದನ್ನು 54 ಅಡಿ ಎತ್ತರದ ಕಟ್ಟಡದ ಮೇಲೆ ಸ್ಥಾಪಿಸಲಾಗಿದೆ, ಇದನ್ನು `ಭದ್ರ ವೇದಿ` ಎಂದು ಹೆಸರಿಸಲಾಗಿದೆ, ವೈದಿಕ ಡಿಜಿಟಲ್ ಗ್ರಂಥಾಲಯ ಮತ್ತು ಸಂಶೋಧನಾ ಕೇಂದ್ರ, ಪ್ರಾಚೀನ ಭಾರತೀಯ ಗ್ರಂಥಗಳು, ರಂಗಮಂದಿರ, ಶ್ರೀ ರಾಮಾನುಜಾಚಾರ್ಯರ ಅನೇಕ ಕೃತಿಗಳನ್ನು ವಿವರಿಸುವ ಶೈಕ್ಷಣಿಕ ಗ್ಯಾಲರಿಗಾಗಿ ಮೀಸಲಾದ ಮಹಡಿಗಳನ್ನು ಇದು ಹೊಂದಿದೆ.
“ಶ್ರೀ ರಾಮಾನುಜಾಚಾರ್ಯರು ಒಂದೆಡೆ ಜ್ಞಾನದ ಪರಾಕಾಷ್ಠೆಯಾದರೆ ಮತ್ತೊಂದೆಡೆ ಭಕ್ತಿಮಾರ್ಗದ ಜನಕ. ಈ ಸಂದರ್ಭದಲ್ಲಿ ಜಗತ್ತಿನಾದ್ಯಂತ ಇರುವ ಶ್ರೀ ರಾಮಾನುಜಾಚಾರ್ಯರ ಅನುಯಾಯಿಗಳನ್ನು ನಾನು ಅಭಿನಂದಿಸುತ್ತೇನೆ. ಈ ಪ್ರತಿಮೆಯು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುವುದು ಮಾತ್ರವಲ್ಲದೆ ದೇಶದ ಐತಿಹಾಸಿಕ ಗುರುತನ್ನು ಬಲಪಡಿಸುತ್ತದೆ. ಶ್ರೀ ರಾಮಾನುಜಾಚಾರ್ಯರ ಜೀವನ ಮತ್ತು ಬೋಧನೆಗಳು ಈ ಜಗತ್ತಿಗೆ ಸರಿಯಾದ ಮಾರ್ಗವನ್ನು ತೋರಿಸಲಿ ಎಂದು ನಾನು ಸರಸ್ವತಿ ದೇವಿಯನ್ನು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.