ನವದೆಹಲಿ: ಭಾರತದ ಸಂಗೀತ ಸಾಮ್ರಾಜ್ಞಿ ಲತಾ ಮಂಗೇಶ್ಕರ್ ಅವರು ಇಂದು ಮುಂಜಾನೆ ಇಹಲೋಕವನ್ನು ತ್ಯಜಿಸಿದ್ದಾರೆ. ಅವರ ನಿಧನ ದೇಶವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆ ನಡೆಸಲಾಗುತ್ತದೆ. ಗೌರವ ಸೂಚಕವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ, ಲತಾ ಮಂಗೇಶ್ಕರ್ ಅವರ ಅಂತಿಮ ಯಾತ್ರೆ ಪ್ರಾರಂಭವಾಗುವ ಮೊದಲು ಅವರ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್ಗೆ ಕೊಂಡೊಯ್ಯಲಾಗುತ್ತದೆ.
ಲತಾ ಮಂಗೇಶ್ಕರ್ ಅವರು 1942 ರಲ್ಲಿ ತಮ್ಮ 13 ನೇ ವಯಸ್ಸಿನಲ್ಲಿ ತಮ್ಮ ಗಾಯನ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಹಲವಾರು ಭಾರತೀಯ ಭಾಷೆಗಳಲ್ಲಿ 30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ಶ್ರೇಯಸ್ಸು ಅವರದ್ದು.
ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರು ಟ್ವೀಟ್ ಮಾಡಿ, “ಲತಾ ದೀದಿ ಅವರ ಹಾಡುಗಳು ವಿವಿಧ ಭಾವನೆಗಳನ್ನು ತಂದವು. ದಶಕಗಳ ಕಾಲ ಭಾರತೀಯ ಚಲನಚಿತ್ರ ಪ್ರಪಂಚದ ಸ್ಥಿತ್ಯಂತರಗಳನ್ನು ಅವರು ನಿಕಟವಾಗಿ ವೀಕ್ಷಿಸಿದರು. ಚಲನಚಿತ್ರಗಳ ಆಚೆಗೆ, ಅವರು ಯಾವಾಗಲೂ ಭಾರತದ ಬೆಳವಣಿಗೆಯ ಬಗ್ಗೆ ಉತ್ಸುಕರಾಗಿದ್ದರು. ಅವರು ಯಾವಾಗಲೂ ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನೋಡಲು ಬಯಸಿದ್ದರು” ಎಂದಿದ್ದಾರೆ.
Lata Didi’s songs brought out a variety of emotions. She closely witnessed the transitions of the Indian film world for decades. Beyond films, she was always passionate about India’s growth. She always wanted to see a strong and developed India. pic.twitter.com/N0chZbBcX6
— Narendra Modi (@narendramodi) February 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.